ವಯನಾಡು: ಕೇರಳದ ವಯನಾಡಿನಲ್ಲಿ ಭಾರಿ ಮಳೆಗೆ ಸಂಭವಿಸಿದ ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ ಏರುತ್ತಲೇ ಇದೆ. ಸದ್ಯ ಮಾಹಿತಿ ಪ್ರಕಾರ ಸಾವಿನ ಸಂಖ್ಯೆ 93ಕ್ಕೆ ಏರಿಕೆಯಾಗಿದೆ.100ಕ್ಕೂ ಅಧಿಕ ಮಂದಿ ಗಾಯಗೊಂಡು ಚಿಕಿತ್ಸೆಯಲ್ಲಿದ್ದಾರೆ. ಹಲವು ಮಂದಿ ಮಣ್ಣಿನಡಿ
ಸಿಲುಕಿಕೊಂಡಿರುವ ಶಂಕೆಯಿದ್ದು ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ.ಘಟನೆ ಸಂಬಂಧ ಕೇರಳ ಸರ್ಕಾರ ರಾಜ್ಯಾದ್ಯಂತ ಇಂದು (ಜುಲೈ 30) ಮತ್ತು ನಾಳೆ (ಜುಲೈ 31) ರಾಜ್ಯಾದ್ಯಂತ ಶೋಕಾಚರಣೆ ಘೋಷಿಸಿದೆ. ಭೂಸೇನೆ, ರಾಷ್ಟ್ರೀಯ ಮತ್ತು ರಾಜ್ಯ ವಿಪತ್ತು ನಿರ್ವಹಣ ತಂಡ ಸೇರಿದಂತೆ ಎಲ್ಲ ರಕ್ಷಣಾ ಏಜೆನ್ಸಿಗಳು ಸ್ಥಳದಲ್ಲಿ ಬೀಡುಬಿಟ್ಟು, ರಕ್ಷಣಾ ಕಾರ್ಯದಲ್ಲಿ ತೊಡಗಿವೆ.
ವಯನಾಡಿನಲ್ಲಿ ಮುಂಡಕ್ಕಲ್ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದ್ದು, ಮಕ್ಕಳು ಸೇರಿದಂತೆ ಈವರೆಗೂ 93ಮಂದಿ ಮೃತಪಟ್ಟಿದ್ದಾರೆ. ಕುಟುಂಬ ಸದಸ್ಯರನ್ನು ಕಳೆದುಕೊಂಡವ ಆಕ್ರಂದನ ಮುಗಿಲು ಮುಟ್ಟಿದೆ. ಭೂಕುಸಿತದಿಂದ ಅಟ್ಟಮಾಲ ಮತ್ತು ಮುಂಡಕ್ಕಲ್ ಪ್ರದೇಶಗಳು ಸೇರಿದಂತೆ ಜಿಲ್ಲೆಯ ಉಳಿದ ಭಾಗಗಳ ಸಂಪರ್ಕ ಕಡಿತಗೊಂಡಿವೆ.