ತಿರುವನಂತಪುರಂ: ವಯನಾಡಿನಲ್ಲಿ ಭೂ ಕುಸಿತದಿಂದ ಉಂಟಾದ ದುರಂತದದ ಕಾರ್ಯಾಚರಣೆಗೆ ಎಲ್ಲಾ ನೆರವು ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ಈ ವಿಚಾರವಾಗಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಬಳಿ ಮಾತನಾಡಿ, ಅಗತ್ಯ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ. ವಯನಾಡಿನ ಕೆಲವು ಭಾಗಗಳಲ್ಲಿ
ಭೂಕುಸಿತದಿಂದ ಜನರು ಸಂಕಷ್ಟಕ್ಕೀಡಾಗಿದ್ದಾರೆ, ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ದುಃಖ ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ, ಗಾಯಗೊಂಡವರು ಬೇಗ ಗುಣಮುಖರಾಗಲಿ. ಭೂಕುಸಿತದ ಕುರಿತು ಪಿಣರಾಯಿ ವಿಜಯ್ ಅವರೊಂದಿಗೆ ಮಾತನಾಡಿದ್ದೇನೆ ಎಲ್ಲಾ ನೆರವನ್ನು ನೀಡಲು ಕೇಂದ್ರ ಸಿದ್ಧವಿದೆ ಎಂದು ಮೋದಿ ತಮ್ಮ ಎಕ್ಸ್ ಖಾತೆಯಲ್ಲಿ ಕೇಂದ್ರ ಸಚಿವ ಸುರೇಶ್ ಗೋಪಿ ಅವರೊಂದಿಗೂ ಪ್ರಧಾನಿ ಮೋದಿ ಮಾತನಾಡಿದ್ದಾರೆಂದು ತಿಳಿದುಬಂದಿದೆ.
ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಪ್ರಧಾನಿ ಮೋದಿ ಕಾರ್ಯಾಲಯ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ. ಗಾಯಗೊಂಡವರಿಗೆ 50,000 ನೀಡಲಾಗುತ್ತದೆ
ಲೋಕಸಭೆ ವಿರೋಧ ಪಕ್ಷದ ನಾಯಕ ಮತ್ತು ವಯನಾಡ್ನ ಮಾಜಿ ಲೋಕಸಭಾ ಸಂಸದ ರಾಹುಲ್ ಗಾಂಧಿ, ವಯನಾಡಿಗೆ ಸಾಧ್ಯವಿರುವ ಎಲ್ಲ ನೆರವು ಕೋರಲು ಕೇಂದ್ರ ಸಚಿವರೊಂದಿಗೆ ಮಾತನಾಡುವುದಾಗಿ ಹೇಳಿದ್ದಾರೆ.