ಕಲ್ಪಟ್ಟ: ವಯನಾಡ್ ಜಿಲ್ಲೆಯ ಕಲ್ಲಾಡಿಯಲ್ಲಿ ಭಾರಿ ಮಳೆಯಿಂದಾಗಿ ಭೂಕುಸಿತ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅವಘಡದಲ್ಲಿ ಏಳು ಮಂದಿ ಗಾಯಗೊಂಡಿದ್ದರೆ, ಇತರ ಏಳು ಜನರು ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.
ಕೋಯಿಕ್ಕೋಡ್ ಮತ್ತು ವಯನಾಡ್ ಜಿಲ್ಲೆಗಳನ್ನು ಸಂಪರ್ಕಿಸುವ ಸುರಂಗ ರಸ್ತೆ ಯೋಜನೆಯ ಕಾಮಗಾರಿ ನಡೆಯುತ್ತಿದ್ದ ಕಲ್ಲಾಡಿಯ ಬಳಿ ಭೂಕುಸಿತ ಸಂಭವಿಸಿದೆ ಆ ಪ್ರದೇಶದಲ್ಲಿ ಭಾರಿ ಮಳೆಯಾಗಿತ್ತು.







