ಚೆನ್ನೈ: ಭಾರತ ವಿರುದ್ಧ ನಡೆಯುತ್ತಿರುವ ಏಕದಿನ ವಿಶ್ವಕಪ್ ಪಂದ್ಯದಲ್ಲಿ ಟಾಸ್ ಗೆದ್ದಿರುವ ಆಸ್ಟ್ರೇಲಿಯಾ ನಾಯಕ ಪ್ಯಾಟ್ ಕಮಿನ್ಸ್ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಆಸ್ಟ್ರೇಲಿಯಾಕ್ಕೆ ಮೊದಲ ವಿಕೆಟ್ ನಷ್ಟವಾಗಿದೆ. ಸ್ಪೋಟಕ ಬ್ಯಾಟರ್ ಮಿಚೆಲ್ ಮಾರ್ಷ್ ಬುಮ್ರಾ ಬೌಲಿಂಗ್ನಲ್ಲಿ ಕೊಹ್ಲಿಗೆ ಕ್ಯಾಚ್ ನೀಡಿ ಪೆವಿಲಿಯನ್ಗೆ ಮರಳಿದ್ದಾರೆ. ಇತ್ತಚಿನ ವರದಿ ಬಂದಾಗ
ಆಸ್ಟ್ರೇಲಿಯಾ 6 ಓವರ್ಗಳಲ್ಲಿ ಒಂದು ವಿಕೆಟ್ ಕಳೆದುಕೊಂಡು 16 ರನ್ ಗಳಿಸಿದೆ.ಭಾರತ ತಂಡದಲ್ಲಿ ಜ್ವರದಿಂದ ಬಳಲುತ್ತಿರುವ ಶುಭಮನ್ ಗಿಲ್ ಸ್ಥಾನಕ್ಕೆ ಇಶಾನ್ ಕಿಶನ್ ಆಯ್ಕೆಯಾಗಿದ್ದಾರೆ. ಶ್ರೇಯಸ್ ಅಯ್ಯರ್, ರವಿಚಂದ್ರನ್ ಅಶ್ವಿನ್ ಸಹ ಪ್ಲೇಯಿಂಗ್ ಇಲೆವೆನ್ನಲ್ಲಿಕಾಣಿಸಿಕೊಂಡಿದ್ದಾರೆ.
ಭಾರತ ತಂಡ:
ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆ.ಎಲ್. ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜ, ರವಿಚಂದ್ರನ್ ಅಶ್ವಿನ್, ಕುಲದೀಪ್ ಯಾದವ್, ಜಸ್ಪ್ರೀತ್ ಬೂಮ್ರಾ ಮತ್ತು ಮೊಹಮ್ಮದ್ ಸಿರಾಜ್.
ಆಸ್ಟ್ರೇಲಿಯಾ ತಂಡ:
ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್, ಸ್ಟೀವ್ ಸ್ಮಿತ್, ಮಾರ್ನಲ್ ಲಾಬುಷೇನ್, ಗ್ಲೆನ್ ಮ್ಯಾಕ್ಸ್ವೆಲ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಕ್ಯಾಮರೂನ್ ಗ್ರೀನ್, ಪ್ಯಾಟ್ ಕಮಿನ್ಸ್ (ನಾಯಕ), ಮಿಚೆಲ್ ಸ್ಟಾರ್ಕ್, ಆ್ಯಡಂ ಜಂಪಾ, ಜೋಶ್ ಹ್ಯಾಜಲ್ವುಡ್.