ಬೆಂಗಳೂರು: ಐಸಿಸಿ ವಿಶ್ವಕಪ್ನ ಲೀಗ್ ಹಂತದ ಕೊನೆಯ ಪಂದ್ಯ ಇಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿದೆ. ಭಾರತ ತಂಡ ನೆದರ್ಲೆಂಡ್ಸ್ ತಂಡವನ್ನು ಎದುರಿಸಲಿದೆ. ಪಾಯಿಂಟ್ ಟೇಬಲ್ನಲ್ಲಿ ಅಗ್ರಸ್ಥಾನ ಪಡೆದು ಈಗಾಗಲೇ ಸೆಮಿ ಫೈನಲ್ಗೇರಿರುವ ಟೀಮ್ ಇಂಡಿಯಾಕ್ಕೆ ಇಂದಿನ
ಪಂದ್ಯ ಲೆಕ್ಕಕ್ಕಿಲ್ಲದ ಕಾರಣ ಕೆಲ ಆಟಗಾರರಿಗೆ ವಿಶ್ರಾಂತಿ ನೀಡುವ ಸಾಧ್ಯತೆ ಇದೆ. ಅಲ್ಲದೆ ಸೆಮಿಫೈನಲ್ಗೆ ಮುಂಚಿತವಾಗಿ ಒಂದು ಅಭ್ಯಾಸ ಪಂದ್ಯವಾಗಲಿದೆ. ನೆದರ್ಲೆಂಡ್ಸ್ ಟೂರ್ನಿಯಿಂದ ಹೊರಬಿದ್ದಾಗಿದೆ. ಕುಲ್ದೀಪ್ ಯಾದವ್, ಜಸ್ಪ್ರಿತ್ ಬುಮ್ರಾ ಮತ್ತಿತರ ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡುವ ಸಾಧ್ಯತೆ ಇದೆ. ಬೆಂಚ್ ಕಾಯುವ ಇತರ ಆಟಗಾರರಿಗೆ ಅವಕಾಶ ನೀಡುವ ಸಾಧ್ಯತೆ ಇದೆ. ಈ ಮಧ್ಯೆ ವಿರಾಟ್ ಕೊಹ್ಲಿ ಬೆಂಗಳೂರಿನಲ್ಲಿ ಶತಕ ಸಿಡಿಸಿ ಸಚಿನ್ ದಾಖಲೆ ಮುರಿಯುತ್ತಾರಾ ಎಂಬ ಕುತೂಹಲ ಇದೆ.
ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣ ಬ್ಯಾಟಿಂಗ್ಗೆ ಹೆಚ್ಚು ಅನುಕೂಲ. ಪಂದ್ಯ ಆರಂಭ ಮಧ್ಯಾಹ್ನ 2 ರಿಂದ.









