ಸುಳ್ಯ:ಕರ್ನಾಟಕ ರಾಜ್ಯ ವೇಟ್ ಲಿಫ್ಟಿಂಗ್ ಸಂಸ್ಥೆ ಬೆಂಗಳೂರು, ಸುಳ್ಯದ ಸ್ಪೋರ್ಟ್ಸ್ ಮತ್ತು ಆರ್ಟ್ಸ್ ಎಸೋಸಿಯೇಶನ್ ಹಾಗೂ ಕರ್ನಾಟಕ ರಾಜ್ಯ ವೇಟ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ಸಂಘಟನಾ ವತಿಯಿಂದ ಕರ್ನಾಟಕ ರಾಜ್ಯ ಮಟ್ಟದ ವೇಟ್ ಲಿಫ್ಟಿಂಗ್ ಚಾಂಪಿಯನ್ಶಿಪ್ ಸುಳ್ಯದ ಯುವಜನ ಸಂಯುಕ್ತ ಮಂಡಳಿ ಬಳಿಯ ಸುಳ್ಯದ ಜೂನಿಯಲ್ ಕಾಲೇಜು ಮೈದಾನದಲ್ಲಿ ನಡೆಯುತಿದೆ. 3 ದಿನಗಳ ಕಾಲ ನಡೆಯುತ್ತಿರುವ
ಜೂನಿಯರ್, ಸಬ್ ಜೂನಿಯರ್, ಹಾಗೂ ಸೀನಿಯರ್ ವಿಭಾಗದ ಪುರುಷ ಮತ್ತು ಮಹಿಳೆಯರ ವೇಟ್ ಲಿಪ್ಟಿಂಗ್ ಚಾಂಪಿಯನ್ಷಿಪ್ ಭಾನುವಾರ ಸಮಾಪನಗೊಳ್ಳಲಿದೆ. ರಾಜ್ಯದ ವಿವಿಧ ಭಾಗಗಳಿಂದ ವಿವಿಧ ವಿಭಾಗಗಳಲ್ಲಿ 350 ಮಂದಿ ಸ್ಪರ್ಧಾಳುಗಳು ಭಾಗವಹಿಸುತ್ತಿದ್ದಾರೆ.ಮಾಜಿ ಅಂತಾರಾಷ್ಟ್ರೀಯ ವೇಟ್ ಲಿಫ್ಟರ್ ಆರ್ಥರ್ ಡಿಸೋಜಾ ವೇಟ್ ಲಿಪ್ಟಿಂಗ್ ಚಾಂಪಿಯನ್ಷಿಪ್ ಉದ್ಘಾಟಿಸಿದರು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕಿ ಭಾಗೀರಥಿ ಮುರುಳ್ಯ ವಹಿಸಿದ್ದರು. ಮಾಜಿ ಸಂಸದ ನಳೀನ್ ಕುಮಾರ್ ಕಟೀಲ್, ಭಾರತೀಯ ವೇಟ್ ಲಿಫ್ಟಿಂಗ್ ಫೆಢರೇಷನ್ನ ಪ್ರಧಾನ ಕಾರ್ಯದರ್ಶಿ ಆನಂದೇ ಗೌಡ ಮುಖ್ಯ ಅತಿಥಿಯಾಗಿದ್ದರು.

ರಾಜ್ಯ ಕಾರ್ಮಿಕರ ಕನಿಷ್ಟ ವೇತನಾ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ.ಶಹೀದ್ ತೆಕ್ಕಿಲ್, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ , ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷ ಡಾ.ರೇಣುಕಾ ಪ್ರಸಾದ್ ಕೆ.ವಿ, ಸುಳ್ಯ ತಹಶೀಲ್ದಾರ್ ಮಂಜುಳಾ ಎಂ, ನಗರ ಪಂಚಾಯತ್ ಮಾಜಿ ಅಧ್ಯಕ್ಷೆ ಶಶಿಕಲಾ ಎ ನೀರಬಿದಿರೆ, ಸೂಡ ಅಧ್ಯಕ್ಷ ಕೆ.ಎಂ.ಮುಸ್ತಫ, ನಗರ ಪಂಚಾಯತ್ ಮಾಜಿ ಸದಸ್ಯೆ ಕಿಶೋರಿ ಶೇಟ್, ಸರಕಾರಿ ಪದವಿಪೂರ್ವ ಕಾಲೇಜು ಪ್ರಾಂಶುಪಾಲ ಮೋಹನ್ ಗೌಡ ಬೊಮ್ಮೆಟ್ಟಿ, ಲಯನ್ಸ್ ಕ್ಲಬ್ ಅಧ್ಯಕ್ಷ ದೀಪಕ್ ಕುತ್ತಮೊಟ್ಟೆ, ಯುವಜನ ಸಂಯುಕ್ತ ಮಂಡಳಿ ಅಧ್ಯಕ್ಷ ಪವನ್ ಪಲ್ಲತ್ತಡ್ಕ ವೇದಿಕೆಯಲ್ಲಿ
ಉಪಸ್ಥಿತರಿದ್ದರು.
ರಾಜ್ಯಮಟ್ಟದ ವೇಟ್ ಲಿಪ್ಟಿಂಗ್ ಚಾಂಪಿಯನ್ ಶಿಪ್ನ ಸಂಘಟನಾ ಸಮಿತಿಯ ಕೋಶಾಧಿಕಾರಿ ಅಶೋಕ್ ಪ್ರಭು ಸ್ವಾಗತಿಸಿ ಪ್ರಸ್ತಾವಿಕವಾಗಿ ಮಾತನಾಡಿದರು. ಕಾರ್ಯದರ್ಶಿ ಸುನಿಲ್ ಕೇರ್ಪಳ ವಂದಿಸಿದರು.ಪತ್ರಕರ್ತ ಶಿವ ಪ್ರಸಾದ್ ಆಲೆಟ್ಟಿ ಕಾರ್ಯಕ್ರಮ ನಿರೂಪಿಸಿ. ಆಕರ್ಷಕ ಇಂಡೋರ್ ಸ್ಟೇಡಿಯಂನಲ್ಲಿ 2 ಅಂಕಣದಲ್ಲಿ ಸ್ಪರ್ಧೆಗಳು ನಡೆಯುತಿದೆ.












