ಸುಳ್ಯ: ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಬಳಿಕ ಪ್ರಥಮ ಬಾರಿಗೆ ಸುಳ್ಯಕ್ಕೆ ಆಗಮಿಸಿದ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಪುರುಷೋತ್ತಮ ಬಿಳಿಮಲೆ ಅವರಿಗೆ ಪ್ರಮುಖರು ಸ್ವಾಗತ ನೀಡಿದರು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಟಿ ಎಂ ಶಹೀದ್ ತೆಕ್ಕಿಲ್,ಕರ್ನಾಟಕ
ಅರೆಭಾಷೆ, ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಜಿ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಚಂದ್ರಶೇಖರ ಪೇರಾಲು, ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಕಾರ್ಯನಿರ್ವಾಹಣಾಧಿಕಾರಿ ಕೆ. ಟಿ. ವಿಶ್ವನಾಥ್, ನಗರ ಪಂಚಾಂಯತ್ ಸದಸ್ಯ ಸಿದ್ದಿಕ್ ಕೊಕ್ಕೊ ಮೊದಲಾದವರು ಸೇರಿ ಸ್ವಾಗತಿಸಿದರು.ಸೋಮವಾರ ಎನ್ಎಂಸಿಯಲ್ಲಿ ನಡೆಯುವ ವಿಚಾರ ಸಂಕಿರಣ ಕಾರ್ಯಕ್ರಮದಲ್ಲಿ ಭಾಗವಹಿಸಲು ಡಾ.ಬಿಳಿಮಲೆಯವರು ಸುಳ್ಯಕ್ಕೆ ಆಗಮಿಸಿದ್ದಾರೆ.