ಹೊಸದಿಲ್ಲಿ: ವೆಸ್ಟ್ಇಂಡೀಸ್ ವಿರುದ್ಧ ಮುಂಬರುವ 2 ಪಂದ್ಯಗಳ ಟೆಸ್ಟ್ ಸರಣಿ ಹಾಗೂ 3 ಪಂದ್ಯಗಳ ಏಕದಿನ ಸರಣಿಗೆ ಬಿಸಿಸಿಐ ಆಯ್ಕೆ ಸಮಿತಿಯು ಶುಕ್ರವಾರ ಭಾರತ ಕ್ರಿಕೆಟ್ ತಂಡವನ್ನು ಪ್ರಕಟಿಸಿದೆ. ಟೆಸ್ಟ್ ಕ್ರಿಕೆಟ್ ಸ್ಪೆಷಲಿಸ್ಟ್ ಚೇತೇಶ್ವರ ಪೂಜಾರರನ್ನು ತಂಡದಿಂದ ಕೈಬಿಡಲಾಗಿದೆ. ಹಿರಿಯ ವೇಗಿ ಮುಹಮ್ಮದ್ ಶಮಿಗೆ ವಿಶ್ರಾಂತಿ ನೀಡಲಾಗಿದೆ. ಹೊಸ ಮುಖಗಳಾದ ಯಶಸ್ವಿ ಜೈಸ್ವಾಲ್ ಹಾಗೂ ಋತುರಾಜ್ ಗಾಯಕ್ವಾಡ್ಗೆ ಮಣೆ ಹಾಕಲಾಗಿದೆ. ಯುವ ಆಟಗಾರರಾದ
ಯಶಸ್ವಿ ಜೈಸ್ವಾಲ್, ಋತುರಾಜ್ ಗಾಯಕ್ವಾಡ್ ಹಾಗೂ ವೇಗದ ಬೌಲರ್ ಮುಕೇಶ್ ಕುಮಾರ್ ಇದೇ ಮೊದಲ ಬಾರಿ ಟೆಸ್ಟ್ ಕ್ರಿಕೆಟ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ಅಜಿಂಕ್ಯ ರಹಾನೆ ಅವರನ್ನು ಉಪ ನಾಯಕನನ್ನಾಗಿ ಭಡ್ತಿ ನೀಡಲಾಗಿದೆ.
ಪೂಜಾರ ಜೊತೆಗೆ ಹಿರಿಯ ವೇಗದ ಬೌಲರ್ ಉಮೇಶ್ ಯಾದವ್ರನ್ನು ಟೆಸ್ಟ್ ತಂಡದಿಂದ ಕೈಬಿಡಲಾಗಿದೆ. ವೇಗಿ ನವದೀಪ್ ಸೈನಿ ಟೆಸ್ಟ್ ತಂಡಕ್ಕೆ ವಾಪಸಾಗಿದ್ದಾರೆ.
ರೋಹಿತ್ ಶರ್ಮಾ ಟೆಸ್ಟ್ ಹಾಗೂ ಏಕದಿನ ತಂಡದಲ್ಲಿ ನಾಯಕನಾಗಿ ಮುಂದುವರಿಯಲಿದ್ದಾರೆ. 5 ಪಂದ್ಯಗಳ ಟ್ವೆಂಟಿ-20 ಸರಣಿಗಾಗಿ ಭಾರತ ತಂಡವನ್ನು ಇನ್ನಷ್ಟೇ ಪ್ರಕಟಿಸಬೇಕಾಗಿದೆ.
ಭಾರತವು ಜುಲೈ 12ರಿಂದ 16ರ ತನಕ ಡೊಮಿನಿಕಾದಲ್ಲಿ ಮೊದಲ ಟೆಸ್ಟ್ ಆಡುವ ಮೂಲಕ ಕೆರಿಬಿಯನ್ ಪ್ರವಾಸವನ್ನು ಆರಂಭಿಸಲಿದೆ. 2ನೇ ಟೆಸ್ಟ್ ಪಂದ್ಯವು ಟ್ರಿನಿಡಾಡ್ನಲ್ಲಿ ಜುಲೈ 20ರಿಂದ 24ರ ತನಕ ನಡೆಯಲಿದೆ.
ಭಾರತದ ಟೆಸ್ಟ್ ತಂಡ: ರೋಹಿತ್ ಶರ್ಮಾ(ನಾಯಕ), ಶುಭಮನ್ ಗಿಲ್, ಋತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಯಶಸ್ವಿ ಜೈಸ್ವಾಲ್, ಅಜಿಂಕ್ಯ ರಹಾನೆ (ಉಪನಾಯಕ), ಕೆ.ಎಸ್.ಭರತ್(ವಿಕೆಟ್ ಕೀಪರ್), ಇಶಾನ್ ಕಿಶನ್(ವಿಕೆಟ್ಕೀಪರ್), ಆರ್.ಅಶ್ವಿನ್, ರವೀಂದ್ರ ಜಡೇಜ, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್, ಮುಹಮ್ಮದ್ ಸಿರಾಜ್, ಮುಕೇಶ್ ಕುಮಾರ್, ಜಯದೇವ್ ಉನದ್ಕಟ್ ಹಾಗೂ ನವದೀಪ್ ಸೈನಿ.
ಭಾರತದ ಏಕದಿನ ತಂಡ: ರೋಹಿತ್ ಶರ್ಮಾ(ನಾಯಕ), ಶುಭಮನ್ ಗಿಲ್, ಋತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಸಂಜು ಸ್ಯಾಮ್ಸನ್(ವಿಕೆಟ್ ಕೀಪರ್), ಇಶಾನ್ ಕಿಶನ್(ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ(ಉಪ ನಾಯಕ), ಶಾರ್ದೂಲ್ ಠಾಕೂರ್, ರವೀಂದ್ರ ಜಡೇಜ, ಅಕ್ಷರ್ ಪಟೇಲ್, ಯಜುವೇಂದ್ರ ಚಹಾಲ್, ಕುಲದೀಪ್ ಯಾದವ್, ಜಯದೇವ್ ಉನದ್ಕಟ್, ಮುಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್ ಹಾಗೂ ಮುಕೇಶ್ ಕುಮಾರ್.