ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ, ದಕ್ಷಿಣ ಕನ್ನಡ ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲೆ ಪಂಚಾಯತ್, ದಕ್ಷಿಣ ಕನ್ನಡ ಪೊಲೀಸ್ ಇಲಾಖೆ, ಸುಳ್ಯ ತಾಲೂಕು ಕಾರ್ಯ ನಿರತ ಪತ್ರಕರ್ತರ ಸಂಘ, ಸುಬ್ರಹ್ಮಣ್ಯ ಪ್ರೆಸ್ ಕ್ಲಬ್, ಸುಳ್ಯ ತಾಲೂಕು ಪಂಚಾಯತ್, ಹರಿಹರ ಗ್ರಾಮ ಪಂಚಾಯತ್, ಕೊಲ್ಲ ಮೊಗರು ಗ್ರಾಮ ಪಂಚಾಯತ್,ವಿಜಯ ಗ್ರಾಮೀಣಾ ಭಿವೃದ್ಧಿ ಪ್ರತಿಷ್ಠಾನ ಮಂಗಳೂರು ಮತ್ತು ಸ್ಥಳೀಯ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ಕೊಲ್ಲಮೊಗರು ಸರಕಾರಿ ಶಾಲೆ ಬಂಗ್ಲೆಗುಡ್ಡೆಯಲ್ಲಿ ನಡೆದ5ನೆ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ
ಎರಡು ಗಾಲಿ ಖುರ್ಚಿ ಗಳನ್ನು ವಿತರಿಸಲಾಯಿತು.
ಸಭಾಪತಿ ಯು.ಟಿ.ಖಾದರ್ ಹಾಗೂ ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ವಿತರಿಸಿದರು. ಎ.ಜೆ.ಆಸ್ಪತ್ರೆ ಹಾಗೂ ವೈದ್ಯಕೀಯ ಮಹಾವಿದ್ಯಾಲಯ ಸಂಶೋಧನಾ ಕೇಂದ್ರ ದ ವೈದ್ಯರ ತಂಡದ ಮೂಲಕ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ನಡೆಯಿತು.
ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ,ಪುತ್ತೂರು ಸಹಾಯಕ ಆಯುಕ್ತ ಜುಬಿನ್ ಮೊಹಾಪಾತ್ರ, ತಹಶಿಲ್ದಾರ್ ಮಂಜುನಾಥ್, ಡಿಎಪ್ಒ ಆಂಟೋನಿ ಮರಿಯಪ್ಪ, ಕೊಲ್ಲಮೊಗ್ರು ಗ್ರಾ.ಪಂ. ಅಧ್ಯಕ್ಷೆ ಜಯಶ್ರೀ ಚಾಂತಾಳ, ಹರಿಹರ ಗ್ರಾ.ಪಂ. ಅಧ್ಯಕ್ಷ ವಿಜಯ ಅಂಙಣ ದ.ಕ ಜಿಲ್ಲಾ ಕಾರ್ಯ ನಿರತವಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಮತ್ತಿತರರು ಉಪಸ್ಥಿತರಿದ್ದರು.ಪತ್ರಕರ್ತರ ಗ್ರಾಮ ವಾಸ್ತವ್ಯ ಒಂದು ಮಾದರಿ ಕಾರ್ಯಕ್ರಮ ಈ ಸಂದರ್ಭದಲ್ಲಿ ಗ್ರಾಮೀಣ ಪ್ರದೇಶದ ವಿಕಲಚೇತನರನ್ನು ಗುರುತಿಸಿ ಅವರಿಗೆ ಇಂಡಿಯನ್ ರೆಡ್ ಕ್ರಾಸ್ ವತಿಯಿಂದ ಗಾಲಿ ಖುರ್ಚಿಯನ್ನು ಅರ್ಹರಿಗೆ ನೀಡಲು ಪತ್ರಕರ್ತರ ಗ್ರಾಮ ವಾಸ್ತವ್ಯ ಮೂಲಕ ಅವಕಾಶವಾಗಿದೆ “ಎಂದು ಇಂಡಿಯನ್ ರೆಡ್ ಕ್ರಾಸ್ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಸಭಾಪತಿ ಶಾಂತರಾಮ ಶೆಟ್ಟಿ ಸಿ.ಎ ಸಂತಸ ವ್ಯಕ್ತಪಡಿಸಿದ್ದಾರೆ.