ನವದೆಹಲಿ: ವೆಸ್ಟ್ ಇಂಡೀಸ್ ವಿರುದ್ಧ ನಡೆಯಲಿರುವ ಸರಣಿಗೆ ಭಾರತ ಏಕದಿನ,ಟಿ20 ತಂಡ ಪ್ರಕಟಿಸಲಾಗಿದೆ ಅನುಭವಿಗಳಾದ ಹಾರ್ದಿಕ್ ಪಾಂಡ್ಯ ಮತ್ತು ರಿಷಭ್ ಪಂತ್ ಅವರನ್ನು ಕೈಬಿಡಲಾಗಿದೆ. ಆಲ್ರೌಂಡರ್ ನಮನ್ ಧೀರ್ ಮತ್ತು ವೇಗದ ಬೌಲರ್ ಅಕಿಬ್ ನಬಿ ಏಕದಿನ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಭಾರತ ತಂಡವು, ವೆಸ್ಟ್ ಇಂಡೀಸ್ ವಿರುದ್ಧ
ಮೂರು ಪಂದ್ಯಗಳ ಏಕದಿನ ಸರಣಿ ಮತ್ತು ಐದು ಟಿ20 ಪಂದ್ಯಗಳ ಸರಣಿಯನ್ನು ಆಡಲಿದೆ. ಮೊದಲ ಏಕದಿನ ಪಂದ್ಯ ಇದೇ 27ರಂದು ತಿರುವನಂತಪುರದಲ್ಲಿ ನಡೆಯಲಿದೆ.ಏಷ್ಯನ್ ಕ್ರೀಡೆಗಳಿಗೆ ಆಯ್ಕೆಯಾಗಿರುವ ತಂಡವನ್ನೇ ಟಿ20 ಸರಣಿಗೆ ಬಹುತೇಕ ಉಳಿಸಿಕೊಳ್ಳಲಾಗಿದೆ. ಮಯಂಕ್ ಯಾದವ್ ಮತ್ತು ಪ್ರಿನ್ಸ್ ಯಾದವ್ ಅವರು ತಂಡಕ್ಕೆ ಸೇರ್ಪಡೆಯಾಗಲಿದ್ದಾರೆ. ಇವರಿಗಾಗಿ ಯಶ್ ಠಾಕೂರ್ ಮತ್ತು ವಿಪ್ರಜ್ ನಿಗಮ್ ಅವರು ಏಷ್ಯನ್ ಗೇಮ್ಸ್ ಬಳಿಕ ಸ್ಥಾನ ತೆರವುಗೊಳಿಸಬೇಕಾಗಿದೆ.ಹಿರಿಯ ಆಲ್ರೌಂಡರ್ ರವೀಂದ್ರ ಜಡೇಜ ಏಕದಿನ ತಂಡಕ್ಕೆ ಮರಳಿದ್ದಾರೆ.
ಏಕದಿನ ತಂಡ: ಶುಭಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಋತುರಾಜ್ ಗಾಯಕವಾಡ್, ಕೆ.ಎಲ್.ರಾಹುಲ್ (ಉಪನಾಯಕ), ಧ್ರುವ್ ಜುರೇಲ್, ನಿತೀಶ್ ಕುಮಾರ್ ರೆಡ್ಡಿ, ರವೀಂದ್ರ ಜಡೇಜ, ಕುಲದೀಪ್ ಯಾದವ್, ಪ್ರಸಿದ್ಧ ಕೃಷ್ಣ, ಗುರ್ನೂರ್ ಬ್ರಾರ್, ಮೊಹಮ್ಮದ್ ಸಿರಾಜ್, ಅಕಿಬ್ ನಬಿ, ಯಶಸ್ವಿ ಜೈಸ್ವಾಲ್, ನಮನ್ ಧೀರ್.
ಟಿ20 ತಂಡ: ಶ್ರೇಯಸ್ ಅಯ್ಯರ್ (ನಾಯಕ), ಅಭಿಷೇಕ್ ಶರ್ಮಾ, ವೈಭವ್ ಸೂರ್ಯವಂಶಿ, ಇಶಾನ್ ಕಿಶನ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ತಿಲಕ್ ವರ್ಮಾ (ಉಪ ನಾಯಕ), ಶಿವಂ ದುಬೆ, ಕುಲದೀಪ್ ಯಾದವ್, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯಿ, ನಿತೀಶ್ ಕುಮಾರ್ ರೆಡ್ಡಿ, ಅರ್ಷದೀಪ್ ಸಿಂಗ್, ಪ್ರಿನ್ಸ್ ಯಾದವ್, ಮಯಂಕ್ ಯಾದವ್.











