ಲಂಡನ್: ಮಹಿಳೆಯರ ಟಿ20 ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಆತಿಥೇಯ ಇಂಗ್ಲೆಂಡ್ ತಂಡವನ್ನು ಮಣಿಸಿದ ಬಲಿಷ್ಠ ಆಸ್ಟ್ರೇಲಿಯಾ ವಿಶ್ವಚಾಂಪಿಯನ್ ಆಗಿ ಹೊರಹೊಮ್ಮಿದೆ.
ಇಂಗ್ಲೆಂಡ್ ನೀಡಿದ್ದ 151 ರನ್ಗಳ ಗುರಿಯನ್ನು ಬೆನ್ನಟ್ಟಿದ ಆಸೀಸ್ ಪಡೆ
7 ವಿಕೆಟ್ಗಳ ಭರ್ಜರಿ ಜಯ ಸಾಧಿಸುವ ಮೂಲಕ 7ನೇ ಬಾರಿಗೆ ವಿಶ್ವಕಪ್ ಕಿರೀಟವನ್ನು ಮುಡಿಗೇರಿಸಿಕೊಂಡಿತು.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ ಪರ ಫ್ರೇಯಾ ಕೆಂಪ್ 28 ಎಸೆತಗಳಲ್ಲಿ 44 ರನ್ (4 ಬೌಂಡರಿ, 1 ಸಿಕ್ಸರ್) ಚಚ್ಚಿದರು. ಇದರಿಂದಾಗಿ ಇಂಗ್ಲೆಂಡ್ ನಿಗದಿತ 20 ಓವರ್ಗಳಲ್ಲಿ 4 ವಿಕೆಟ್ ನಷ್ಟಕ್ಕೆ 150 ರನ್ಗಳ ಮೊತ್ತ ಕಲೆಹಾಕಿತು.151 ರನ್ಗಳ ಗುರಿ ಬೆನ್ನಟ್ಟಿದ ಆಸ್ಟ್ರೇಲಿಯಾ ತಂಡಕ್ಕೆ ಬೆತ್ ಮೂನಿ 64 ರನ್ ಗಳಿಸಿದರು. ಇವರಿಗೆ ಸಾಥ್ ನೀಡಿದ ಯುವ ಬ್ಯಾಟರ್ ಫೀಬಿ ಲಿಚ್ಫೀಲ್ಡ್ 48 ರನ್ ಬಾರಿಸಿ ಶತಕದ ಜೊತೆಯಾಟದ ಸನಿಹದಲ್ಲಿ ಔಟಾದರು.







