ದಂಬುಲಾ: ಮಹಿಳೆಯರ ಏಷ್ಯಾ ಕಪ್ ಟಿ20 ಕ್ರಿಕೆಟ್ ಟೂರ್ನಿಯ ‘ಎ’ ಗುಂಪಿನ ಪಂದ್ಯದಲ್ಲಿ ಯುನೈಟೆಡ್ ಅರಬ್ ಎಮಿರೇಟ್ಸ್ ವಿರುದ್ಧ ಭಾರತ 78 ರನ್ಗಳ ಭರ್ಜರಿ ಗೆಲುವು ದಾಖಲಿಸಿದೆ.ಇದರೊಂದಿಗೆ ಸತತ ಎರಡನೇ ಗೆಲುವು ದಾಖಲಿಸಿರುವ ಭಾರತ ಸೆಮಿಫೈನಲ್ ಹಂತ
ಬಹುತೇಕ ಖಚಿತಪಡಿಸಿದೆ. ಮೊದಲ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಏಳು ವಿಕೆಟ್ ಅಂತರದ ಜಯ ಗಳಿಸಿತ್ತು. ನಾಯಕಿ ಹರ್ಮನ್ಪ್ರೀತ್ ಕೌರ್ (66) ಹಾಗೂ ರಿಚಾ ಘೋಷ್ (64) ಬಿರುಸಿನ ಅರ್ಧಶತಕಗಳ ನೆರವಿನಿಂದ ಮೊದಲು ಬ್ಯಾಟಿಂಗ್ ನಡೆಸಿದ ಭಾರತ 20 ಓವರ್ಗಳಲ್ಲಿ ಐದು ವಿಕೆಟ್ ನಷ್ಟಕ್ಕೆ 201 ರನ್ಗಳ ಬೃಹತ್ ಮೊತ್ತ ಗಳಿಸಿತು.ಈ ಗುರಿ ಬೆನ್ನಟ್ಟಿದ ಯುಎಇ ಏಳು ವಿಕೆಟ್ ನಷ್ಟಕ್ಕೆ 123 ರನ್ ಗಳಿಸಲಷ್ಟೇ ಸಾಧ್ಯವಾಯಿತು. ಕವಿಶ ಈಗೋಡಗೆ 40 ಹಾಗೂ ನಾಯಕಿ ಈಶಾ ರೋಹಿತ್ ಒಝಾ 38 ರನ್ ಗಳಿಸಿದರು.
ಭಾರತದ ಪರ ದೀಪ್ತಿ ಶರ್ಮಾ ಎರಡು ವಿಕೆಟ್ ಗಳಿಸಿದರು. ಗುಂಪು ಹಂತದ ಅಂತಿಮ ಪಂದ್ಯದಲ್ಲಿ ಜುಲೈ 23ರಂದು ನೇಪಾಳವನ್ನು ಎದುರಿಸಲಿದೆ.














