ಸುಳ್ಯ: ಸುಳ್ಯ ತಾಲೂಕು ಪಂಚಾಯತ್, ಸುಳ್ಯ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಸುಳ್ಯ, ಜಿಲ್ಲಾ ಮಹಿಳಾ ಸಬಲೀಕರಣ ಇಲಾಖೆ ಮಂಗಳೂರು,ಪಯಸ್ವಿನಿ ಸಂಜೀವಿನಿ ತಾಲೂಕು ಮಟ್ಟದ ಒಕ್ಕೂಟ ಸುಳ್ಯ ಇವರ ಜಂಟಿ ಆಶ್ರಯದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಮಾ.16ರಂದು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮದ ಅಂಗವಾಗಿ
ಸಭಾ ಕಾರ್ಯಕ್ರಮ, ಮಾಹಿತಿ ಕಾರ್ಯಗಾರ ಮತ್ತು ಸಾಧಕರಿಗೆ ಸನ್ಮಾನ, ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ ಕಾರ್ಯಕ್ರಮ ಉದ್ಘಾಟಿಸಿದರು.ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ರಾಜಣ್ಣ ಅಧ್ಯಕ್ಷತೆ ವಹಿಸಿದ್ದರು. ವೆನ್ಲಾಕ್ ಆಸ್ಪತ್ರೆಯ
ಸಖಿವನ್ ಸ್ಟಾಪ್ ಸೆಂಟರ್ನ ಆಡಳಿತಾಧಿಕಾರಿ ಪ್ರಿಯಾ ಸಂಪನ್ಮೂಲ ವ್ಯಕ್ತಿಯಾಗಿದ್ದರು. ಸುಳ್ಯ ತಾಲೂಕು

ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಶಾಹುಲ್ ಹಮೀದ್ ಕುತ್ತಮೊಟ್ಟೆ, ಸುಳ್ಯ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶೈಲಜಾ.ಬಿ, ಮಿಷನ್ ಶಕ್ತಿ ಯೋಜನೆಯ ಮಹಿಳಾ ಸಬಲೀಕರಣ ಘಟಕದ ಜಿಲ್ಲಾ ಕಾರ್ಯಕ್ರಮ ಸಂಯೋಜಕಿ ಅಶ್ವಿನಿ, ಸುಳ್ಯ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯರಾದ ಧನುಷ್ ಕುಕ್ಕೇಟ್ಟಿ, ಕಾಂತಿ ಮೋಹನ್, ಎನ್ಆರ್ಎಲ್ಎಂ ಒಕ್ಕೂಟದ ತಾಲೂಕು ಅಧ್ಯಕ್ಷೆ ಯಶೋಧಾ ಬಾಳೆಗುಡ್ಡೆ, ಎನ್ಆರ್ಎಲ್ಎಂ ತಾಲೂಕು ಕಾರ್ಯಕ್ರಮ ಸಂಯೋಜಕಿ ಶ್ವೇತಾ, ಪೊಲೀಸ್ ಕಾನ್ಸ್ಟೇಬಲ್ ಜ್ಯೋತಿ, ಸಾಂತ್ವನ ಕೇಂದ್ರದ ಅಧ್ಯಕ್ಷೆ ಹರಿಣಿ ಸದಾಶಿವ ವೇದಿಕೆಯಲ್ಲಿ ಉಪಸ್ಥಿತರಿದ್ದರು. ನವ್ಯಾ ಅವರು ಅಕ್ಕ ಪಡೆ ಕುರಿತು ಮಾಹಿತಿ ನೀಡಿದರು.
ಎನ್ಆರ್ಎಲ್ಎಂ ತಾಲೂಕು ಕಾರ್ಯಕ್ರಮ ಸಂಯೋಜಕಿ ಶ್ವೇತಾ ಸ್ವಾಗತಿಸಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕರಾದ ಉಷಾ ವಂದಿಸಿ, ರವಿಶ್ರೀ ಕಾರ್ಯಕ್ರಮ ನಿರೂಪಿಸಿದರು. ವಿಜಯ, ದೀಪಿಕಾ ಸಹಕಾರ ನೀಡಿದರು. ಕಾರ್ಯಕ್ರಮದ ಅಂಗವಾಗಿ ಸಾಧಕರಿಗೆ ಸನ್ಮಾನ,
ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಒಳಾಂಗಣ ಆಟೋಟ ಸ್ಪರ್ಧೆಗಳು ನಡೆಯಿತು.ಸಂಜೀವಿನಿ ಸದಸ್ಯರ ಉತ್ಪನ್ನಗಳ ಮಾರಾಟ ಹಾಗೂ ಪ್ರದರ್ಶನ ಏರ್ಪಡಿಸಲಾಗಿತ್ತು.












