ನವದೆಹಲಿ:ಮಹಿಳಾ ಮೀಸಲಾತಿ ಕಾನೂನು ತಿದ್ದುಪಡಿ ಹಾಗೂ ಕ್ಷೇತ್ರ ಪುನರ್ವಿಂಗಡಣಾ ಆಯೋಗವನ್ನು ಸ್ಥಾಪಿಸುವ ಬಗ್ಗೆ ಇರುವ ಮೂರು ಮಸೂದೆಗಳ ಮೇಲೆ ಶುಕ್ರವಾರ ಸಂಜೆ 4 ಗಂಟೆಗೆ ಲೋಕಸಭೆಯಲ್ಲಿ ಮತದಾನ ನಡೆಯಲಿದೆ ಎಂದು
ಸ್ಪೀಕರ್ ಓಂ ಬಿರ್ಲಾ ಪ್ರಕಟಿಸಿದ್ದಾರೆ.ಈ ಮಸೂದೆಗಳ ಕುರಿತು ಸುಮಾರು 15 ರಿಂದ 18 ಗಂಟೆಗಳು ಕಾಲ ಚರ್ಚೆ ನಡೆಯಲಿದೆ ಎಂದು ಬಿರ್ಲಾ ಹೇಳಿದ್ದಾರೆ.ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಮಸೂದೆಗಳ ಮೇಲೆ 12 ಗಂಟೆಗಳ ಕಾಲ ಚರ್ಚೆ ನಡೆಸುವಂತೆ ಸಲಹೆ ನೀಡಿದ್ದರು.ಇದಕ್ಕೂ ಮುನ್ನ, ಕೇಂದ್ರ ಸಚಿವರಾದ ಅರ್ಜುನ್ ರಾಮ್ ಮೇಘವಾಲ್ ಮತ್ತು ಅಮಿತ್ ಶಾ ಅವರು ಮಹಿಳಾ ಮೀಸಲಾತಿ ಕಾನೂನಿನ ತಿದ್ದುಪಡಿ ಹಾಗೂ ಕ್ಷೇತ್ರ ಮರುವಿಂಗಡಣಾ ಆಯೋಗ ಸ್ಥಾಪನೆಗೆ ಸಂಬಂಧಿಸಿದ ಮೂರು ಮಸೂದೆಗಳನ್ನು ಲೋಕಸಭೆಯಲ್ಲಿ ಮಂಡಿಸಿದರು. ಈ ವೇಳೆ ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸಿದವು.
















