ನವದೆಹಲಿ: ಮಹಿಳಾ ಟಿ20 ವಿಶ್ವಕಪ್ 2026 ಟೂರ್ನಿಗಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಭಾರತ ತಂಡವನ್ನು ಪ್ರಕಟಿಸಿದೆ. ಜೂನ್ 14 ರಿಂದ ಆರಂಭವಾಗಲಿರುವ ಈ ಮಹಾ ಸಮರಕ್ಕೆ ಅನುಭವಿ ಹರ್ಮನ್ಪ್ರೀತ್ ಕೌರ್ ತಂಡವನ್ನು ಮುನ್ನಡೆಸಲಿದ್ದು, ಸ್ಮೃತಿ ಮಂಧಾನ ಉಪನಾಯಕಿಯಾಗಿ ಆಯ್ಕೆಯಾಗಿದ್ದಾರೆ.ತಂಡದ ಪ್ರಮುಖ
ಆಲ್ರೌಂಡರ್ ಅಮನಜೋತ್ ಕೌರ್ ಗಾಯದ ಸಮಸ್ಯೆಯಿಂದಾಗಿ ವಿಶ್ವಕಪ್ನಿಂದ ಹೊರ ಬಿದ್ದಿದ್ದಾರೆ.
ಜೂ.14ರಂದು ಪಾಕಿಸ್ತಾನದ ವಿರುದ್ಧ ಆಡುವ ಮೂಲಕ ಭಾರತ ವಿಶ್ವಕಪ್ ಅಭಿಯಾನ ಆರಂಭಿಸಲಿದೆ. ಭಾರತ ತಂಡವು ಬಲಿಷ್ಠ ‘ಗ್ರೂಪ್ ಎ’ ನಲ್ಲಿದ್ದು, ಇಲ್ಲಿ ಪಾಕಿಸ್ತಾನ, ಆಸ್ಟ್ರೇಲಿಯಾ, ದಕ್ಷಿಣ ಆಫ್ರಿಕಾ, ಬಾಂಗ್ಲಾದೇಶ ಮತ್ತು ನೆದರ್ಲೆಂಡ್ಸ್ ತಂಡಗಳ ಸವಾಲನ್ನು ಎದುರಿಸಬೇಕಿದೆ.
ವಿಶ್ವಕಪ್ಗೂ ಮುನ್ನ ಭಾರತ ತಂಡವು ಇಂಗ್ಲೆಂಡ್ ವಿರುದ್ಧ ಮೂರು ಪಂದ್ಯಗಳ ಟಿ20 ಸರಣಿಯನ್ನು ಆಡಲಿದೆ. ಮೇ ಅಂತ್ಯ ಮತ್ತು ಜೂನ್ ಮೊದಲ ವಾರದಲ್ಲಿ ನಡೆಯಲಿರುವ ಈ ಸರಣಿಗೆ ವಿಶ್ವಕಪ್ ತಂಡವನ್ನೇ ಕಳುಹಿಸಲು ಬಿಸಿಸಿಐ ನಿರ್ಧರಿಸಿದೆ.
ಭಾರತ ತಂಡ ಹೀಗಿದೆ:
ಹರ್ಮನ್ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ (ಉಪನಾಯಕಿ), ಶೆಫಾಲಿ ವರ್ಮಾ, ಜೆಮಿಮಾ ರೋಡ್ರಿಗಸ್, ರಿಚಾ ಘೋಷ್, ಯಾಸ್ತಿಕಾ ಭಾಟಿಯಾ (ವಿಕೆಟ್ ಕೀಪರ್), ಭಾರತಿ ಫುಲ್ಮಾಲಿ, ದೀಪ್ತಿ ಶರ್ಮಾ, ರಾಧಾ ಯಾದವ್, ಶ್ರೇಯಾಂಕ ಪಾಟೀಲ್, ಅರುಂಧತಿ ರೆಡ್ಡಿ, ನಂದಿನಿ ಶರ್ಮಾ, ರೇಣುಕಾ ಸಿಂಗ್, ಕ್ರಾಂತಿ ಗೌಡ್, ಶ್ರೀ ಚರಣಿ.












