ಧರಂಶಾಲಾ: ವಿಶ್ವಕಪ್ನಲ್ಲಿ ಇಂದು ಎರಡು ಪಂದ್ಯಗಳು ನಡೆಯಲ್ಲಿವೆ. ದಿನದ ಮೊದಲ ಪಂದ್ಯದಲ್ಲಿ ಧರಂಶಾಲಾದಲ್ಲಿ ಆಸ್ಟ್ರೇಲಿಯ, ನ್ಯೂಜಿಲೆಂಡ್ ತಂಡದ ವಿರುದ್ಧ ಕಣಕ್ಕಿಳಿದರೆ, ಎರಡನೇ ಪಂದ್ಯದಲ್ಲಿ ಬಾಂಗ್ಲಾದೇಶ ಮತ್ತು ನೆದರ್ಲೆಂಡ್ ತಂಡಗಳು ಕೋಲ್ಕತ್ತಾದ ಈಡನ್ ಗಾರ್ಡನ್ಸ್ನಲ್ಲಿ ಮುಖಾಮುಖಿಯಾಗಲಿವೆ . ಕಿವೀಸ್ ಎಂಟು ಅಂಕಗಳೊಂದಿಗೆ
ಪಾಯಿಂಟ್ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದರೆ, ಮತ್ತೊಂದೆಡೆ, ಆಸ್ಟ್ರೇಲಿಯಾ 6 ಅಂಕಗಳೊಂದಿಗೆ ನ್ಯೂಜಿಲೆಂಡ್ ನಂತರದ ಸ್ಥಾನದಲ್ಲಿದೆ.
ಮತ್ತೊಂದೆಡೆ, ವಿಶ್ವಕಪ್ನಲ್ಲಿ ತುಲನಾತ್ಮಕವಾಗಿ ದುರ್ಬಲವಾಗಿರುವ ಎರಡು ತಂಡಗಳಾದ ಬಾಂಗ್ಲಾದೇಶ ಮತ್ತು ನೆದರ್ಲ್ಯಾಂಡ್ ಒಂದೇ ಪರಿಸ್ಥಿತಿಯಲ್ಲಿವೆ. ಉಭಯ ತಂಡಗಳು ಇದುವರೆಗೆ ಐದು ಪಂದ್ಯಗಳನ್ನು ಆಡಿದ್ದು, ಕೇವಲ ಒಂದು ಪಂದ್ಯದಲ್ಲಿ ಮಾತ್ರ ಗೆಲುವು ಕಂಡಿವೆ. ಹೀಗಾಗಿ ಎರಡು ತಂಡಗಳಿಗೂ ಈ ಪಂದ್ಯದ ಗೆಲುವು ಅತ್ಯವಶ್ಯಕವಾಗಿದೆ.
ಆಸ್ಟ್ರೇಲಿಯಾ ಹಾಗೂ ನ್ಯೂಜಿಲೆಂಡ್ ನಡುವಿನ ಪಂದ್ಯ ಬೆಳಗ್ಗೆ 10.30ಕ್ಕೆ ಆರಂಭವಾಗಲಿದೆ.ಬಾಂಗ್ಲಾದೇಶ ಮತ್ತು ನೆದರ್ಲ್ಯಾಂಡ್ಸ್ ನಡುವಿನ ಪಂದ್ಯ ಮಧ್ಯಾಹ್ನ 2 ಗಂಟೆಗೆ ಪ್ರಾರಂಭವಾಗಲಿದೆ.
ಸ್ಟಾರ್ ಸ್ಪೋರ್ಟ್ಸ್ ನೆಟ್ವರ್ಕ್ನಲ್ಲಿ ಆಸ್ಟ್ರೇಲಿಯಾ-ನ್ಯೂಜಿಲೆಂಡ್ ಮತ್ತು ಬಾಂಗ್ಲಾದೇಶ-ನೆದರ್ಲ್ಯಾಂಡ್ ಪಂದ್ಯಗಳನ್ನು ವೀಕ್ಷಿಸಬಹುದು.