ಗುವಾಹಟಿ: 2023ರ ವಿಶ್ವಕಪ್ಗಾಗಿ ಭಾರತ ಕ್ರಿಕೆಟ್ ತಂಡದಲ್ಲಿ ಬದಲಾವಣೆಯಾಗಿದೆ. ಗಾಯಗೊಂಡಿರುವ ಆಲ್ ರೌಂಡರ್ ಅಕ್ಷರ್ ಪಟೇಲ್ ಬದಲಿಗೆ ಅನುಭವಿ ಆಲ್ ರೌಂಡರ್ ರವಿಚಂದ್ರನ್ ಅಶ್ವಿನ್ ಅವರನ್ನು ಟೀಂ ಇಂಡಿಯಾಕ್ಕೆ ಆಯ್ಕೆ ಮಾಡಲಾಗಿದೆ. ಏಷ್ಯಾಕಪ್ ವೇಳೆ ಅಕ್ಷರ್ ಪಟೇಲ್ ಗಾಯಗೊಂಡಿದ್ದರು. ಹೀಗಾಗಿ ಅವರು ಏಷ್ಯಾಕಪ್
ಫೈನಲ್ ಪಂದ್ಯವನ್ನು ಆಡಿರಲಿಲ್ಲ. ಆದರೆ ಅಕ್ಷರ್ ವಿಶ್ವಕಪ್ ವೇಳೆಗೆ ಚೇತರಿಸಿಕೊಳ್ಳುವ ವಿಶ್ವಾಸ ಇತ್ತು. ಸೆಪ್ಟೆಂಬರ್ 29 ವಿಶ್ವಕಪ್ ತಂಡದಲ್ಲಿ ಬದಲಾವಣೆ ಮಾಡಲು ಐಸಿಸಿ ನೀಡಿರುವ ಕೊನೆಯ ಗಡುವಾಗಿದ್ದು, ಆಯ್ಕೆ ಸಮಿತಿಯು ಅಶ್ವಿನ್ ಅವರನ್ನು ಅಕ್ಷರ್ ಬದಲಿಗೆ ತಂಡಕ್ಕೆ ಸೇರಿಸಲು ನಿರ್ಧರಿಸಿದೆ.
ಟೀಂ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಆಡಿತ್ತು. ಈ ಸರಣಿಯಲ್ಲಿ ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದ ಅಶ್ವಿನ್ ಉತ್ತಮ ಬೌಲಿಂಗ್ ದಾಳಿ ಸಂಘಟಿಸಿದ್ದರು.
ಈ ಮಧ್ಯೆ ಇಂದಿನಿಂದ ವಿಶ್ವಕಪ್ ಅಭ್ಯಾಸ ಪಂದ್ಯಗಳು ನಟೆಯಲಿದೆ. ಅ.5ರಿಂದ ವಿಶ್ವ ಕಪ್ ಆರಂಭವಾಗಲಿದೆ. ಅದಕ್ಕೂ ಮುನ್ನ ಪ್ರತಿ ತಂಡಗಳು ಎರಡು ಅಭ್ಯಾಸ ಪಂದ್ಯಗಳನ್ನು ಆಡಲಿದೆ. ಭಾರತ ಇಂದು ತನ್ನ ಮೊದಲ ಅಭ್ಯಾಸ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ಎದುರಿಸಲಿದೆ ಗುವಾಹಟಿಯಲ್ಲಿ ಮಧ್ಯಾಹ್ನ 2 ರಿಂದ ಪಂದ್ಯ ಆರಂಭವಾಗಲಿದೆ.