ಮುಂಬೈ: ವಿಶ್ವಕಪ್ ಕ್ರಿಕೆಟ್ನಲ್ಲಿ ಇಂದು ಆಸ್ಟ್ರೇಲಿಯಾ ತಂಡವು ಅಫ್ಘಾನಿಸ್ತಾನವನ್ನು ಎದುರಿಸಲಿದೆ. ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿರುವ ಆಸ್ಟ್ರೇಲಿಯಾ ತಂಡವು ಅಫ್ಗನ್ ವಿರುದ್ಧ ಗೆದ್ದು ನಾಲ್ಕರ ಘಟ್ಟದ ಪ್ರವೇಶವನ್ನು ಖಚಿತಪಡಿಸಿಕೊಳ್ಳುವತ್ತ ಚಿತ್ತ ನೆಟ್ಟಿದೆ. ಇನ್ನೊಂದೆಡೆ ಅಫ್ಗನ್ ತಂಡವೂ ಟೂರ್ನಿಯಲ್ಲಿ ತನ್ನ ಐದನೇ ಜಯವನ್ನು ದಾಖಲಿಸಿ
ಸೆಮಿಫೈನಲ್ ಪ್ರವೇಶಿಸುವ ಕನಸು ಕಾಣುತ್ತಿದೆ.
ಇದುವರೆಗೆ ಏಳು ಪಂದ್ಯಗಳನ್ನು ಆಡಿರುವ ಅಷ್ಮತ್ವುಲ್ಲಾ ಶಹೀದಿ ಬಳಗವು ಹಾಲಿ ಚಾಂಪಿಯನ್ ಇಂಗ್ಲೆಂಡ್, ಮಾಜಿ ಚಾಂಪಿಯನ್ ತಂಡಗಳಾದ ಪಾಕಿಸ್ತಾನ, ಶ್ರೀಲಂಕಾ ಮತ್ತು ನೆದರ್ಲೆಂಡ್ಸ್ ವಿರುದ್ಧ ಗೆದ್ದಿತ್ತು.ಅನುಭವಿ ಸ್ಪಿನ್ನರ್ಗಳಾದ ರಶೀದ್ ಖಾನ್, ಮೊಹಮ್ಮದ್ ನಬಿ ಹಾಗೂ ನೂರ್ ಅಹಮದ್ ಅವರು ಪಂದ್ಯ ಗೆಲ್ಲಿಸಿಕೊಡಬಲ್ಲ ಸಮರ್ಥರಾಗಿದ್ದಾರೆ. ಗ್ಲೆನ್ ಮ್ಯಾಕ್ಸ್ವೆಲ್ ಮತ್ತು ಮಿಚೆಲ್ ಮಾರ್ಷ್ ಅವರ ಗೈರುಹಾಜರಿಯಿಂದಾಗಿ ಆಸ್ಟ್ರೇಲಿಯಾದ ಮಧ್ಯಮ ಕ್ರಮಾಂಕಕ್ಕೆ ದೊಡ್ಡ
ಹೊಡೆತ ಬಿದ್ದಿದೆ. ಪ್ಯಾಟ್ ಕಮಿನ್ಸ್ ಬಳಗವು ಮೊದಲೆರಡು ಪಂದ್ಯಗಳನ್ನು ಸೋತರೂ ಪುಟಿದೆದ್ದು ಸತತ ಐದು ಪಂದ್ಯಗಳನ್ನು ಗೆದ್ದಿದೆ.
ತಂಡಗಳು
ಆಸ್ಟ್ರೇಲಿಯಾ: ಪ್ಯಾಟ್ ಕಮಿನ್ಸ್ (ನಾಯಕ), ಜೋಷ್ ಇಂಗ್ಲಿಷ್, ಟ್ರಾವಿಸ್ ಹೆಡ್, ಡೇವಿಡ್ ವಾರ್ನರ್, ಸ್ಟೀವನ್ ಸ್ಮಿತ್, ಮಾರ್ನಸ್ ಲಾಬುಷೇನ್, ಕ್ಯಾಮರಾನ್ ಗ್ರೀನ್, ಮಾರ್ಕಸ್ ಸ್ಟೊಯಿನಿಸ್, ಮಿಚೆಲ್ ಸ್ಟಾರ್ಕ್, ಆ್ಯಡಂ ಜಂಪಾ, ಜೋಷ್ ಹ್ಯಾಜಲ್ವುಡ್, ಮಿಚೆಲ್ ಮಾರ್ಷ್, ಗ್ಲೆನ್ ಮ್ಯಾಕ್ಸ್ವೆಲ್, ಸೀನ್ ಅಬಾಟ್, ಅಲೆಕ್ಸ್ ಕ್ಯಾರಿ
ಅಫ್ಗಾನಿಸ್ತಾನ: ಹಷ್ಮತ್ವುಲ್ಲಾ ಶಹೀದಿ (ನಾಯಕ), ಇಕ್ರಂ ಅಲಿಖಿಲ್ (ವಿಕೆಟ್ಕೀಪರ್), ರೆಹಮಾನುಲ್ಲಾ ಗುರ್ಬಾಜ್, ಇಬ್ರಾಹಿಂ ಜದ್ರಾನ್, ರೆಹಮತ್ ಶಾ, ಅಜ್ಮತ್ವುಲ್ಲಾ ಒಮರ್ಝೈ, ಮೊಹಮ್ಮದ್ ನಬಿ, ರಶೀದ್ ಖಾನ್, ಮುಜೀಬ್ ಉರ್ ರೆಹಮಾನ್, ಫಜಲ್ಹಕ್ ಫರೂಕಿ, ನೂರ್ ಅಹಮದ್, ನಜೀಬುಲ್ಲಾ ಜದ್ರಾನ್, ನವೀನ್ ಉಲ್ ಹಕ್, ಅಬ್ದುಲ್ ರೆಹಮಾನ್, ರಿಯಾಜ್ ಹಸನ್.
ಪಂದ್ಯ ಆರಂಭ: ಮಧ್ಯಾಹ್ನ 2









