ಪಂಜ: ಉತ್ತಮ ಆರೋಗ್ಯ, ಆಹಾರ, ಅತ್ಯುತ್ತಮ ಪರಿಸರಕ್ಕಾಗಿ ಜನ ಸಂಖ್ಯೆಯ ನಿಯಂತ್ರಣ ಅತೀ ಅಗತ್ಯ. ಜನಸಂಖ್ಯಾ ಸ್ಪೋಟದ ಕುರಿತು ಅರಿವು ಹಾಗೂ ಜಾಗೃತಿ ಅತೀ ಅಗತ್ಯ ಎಂದು ಶಾಸಕಿ ಭಾಗೀರಥಿ ಮುರುಳ್ಯ ಹೇಳಿದ್ದಾರೆ.ಸುಳ್ಯ ತಾಲೂಕು ಆಡಳಿತ, ತಾಲೂಕು ಪಂಚಾಯತ್, ಸುಳ್ಯ ತಾಲೂಕು ಆರೋಗ್ಯಾಧಿಕಾರಿಗಳ ಕಛೇರಿ, ಸುಳ್ಯ, ಸರಕಾರಿ ಪದವಿ ಪೂರ್ವ ಕಾಲೇಜು ಪಂಜ, ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ,ಗ್ರಾಮ ಪಂಚಾಯತ್ ಪಂಜ ಇವರ ಸಂಯುಕ್ತ ಆಶ್ರಯದಲ್ಲಿ
ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಭವನದಲ್ಲಿ ನಡೆದ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
‘ಸರಿಯಾದ ಸಮಯದಲ್ಲಿ ಗರ್ಭಧಾರಣೆ ಹಾಗೂ ಅಂತರ ಕಾಪಾಡುವುದರಿಂದ ತಾಯಿ ಮತ್ತು ಮಗುವಿನ ಆರೋಗ್ಯ ಉತ್ತಮಗೊಳಿಸುವುದು’ ಎಂಬ ಧ್ಯೇಯವಾಕ್ಯದೊಂದಿಗೆ ಈ ವರ್ಷದ ವಿಶ್ವ ಜನಸಂಖ್ಯಾ ದಿನಾಚರಣೆಯನ್ನು ಆಚರಿಸಲಾಯಿತು.
ಪಂಜ ಗ್ರಾಮ ಪಂಚಾಯತ್ ಅಧ್ಯಕ್ಷೆ ವಿಜಯಲಕ್ಷ್ಮಿ ಅಧ್ಯಕ್ಷತೆ ವಹಿಸಿದ್ದರು. ಸುಳ್ಯ ಕೊಡಿಯಾಲಬೈಲು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಸತೀಶ್ ಕುಮಾರ್ ಕೆ.ಆರ್. ಸಂಪನ್ಮೂಲ ವ್ಯಕ್ತಿಯಾಗಿದ್ದರು.
ಪಂಜ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ
ವೆಂಕಪ್ಪ ಗೌಡ ಕೆ. ಪ್ರೌಢ ಶಾಲಾ ವಿಭಾಗದ ಪ್ರಭಾರ ಮುಖ್ಯ ಶಿಕ್ಷಕಿ ನಿರ್ಮಲಾಕ್ಷಿ, ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ
ಗಣೇಶ್ ಪೈ. ಬಿ, ನಿರ್ದೇಶಕ ಚಂದ್ರಶೇಖರ ಶಾಸ್ತ್ರಿ, ಗ್ರಾಮ ಪಂಚಾಯತ್ ಉಪಾಧ್ಯಕ್ಷ ನಾರಾಯಣ ಉಪಸ್ಥಿತರಿದ್ದರು.
ಸುಳ್ಯ ತಾಲೂಕು ಆರೋಗ್ಯಾಧಿಕಾರಿ ಡಾ.ನಂದಕುಮಾರ್ ಬಿ ಪ್ರಾಸ್ತಾವಿಕವಾಗಿ ಮಾತನಾಡಿದರು. ತಾಲೂಕು ಆಶಾ ಮೇಲ್ವಿಚಾರಕಿ ಧನ್ಯಶ್ರೀ ಸ್ವಾಗತಿಸಿ, ಪಂಜ ಪ್ರಾಥಮಿಕ ಆರೋಗ್ಯ ಕೇಂದ್ರದ ಮೇಲ್ವಿಚಾರಕಿ ರಾಹೇಲಮ್ಮ ವಂದಿಸಿದರು. ಆರೋಗ್ಯ ಶಿಕ್ಷಣಾಧಿಕಾರಿ ಪ್ರಮೀಳ. ಟಿ ಕಾರ್ಯಕ್ರಮ ನಿರೂಪಿಸಿದರು.
ಕುಟುಂಬ ಕಲ್ಯಾಣ ಯೋಜನೆ ಅನುಷ್ಠಾನದಲ್ಲಿ ಉತ್ತಮ ಸಾಧನೆ ಮಾಡಿದ ಸಿಬ್ಬಂದಿಗಳನ್ನು ಸಮಾರಂಭದಲ್ಲಿ ಸನ್ಮಾನಿಸಲಾಯಿತು.
ಪ್ರಾಥಮಿಕ ಆರೋಗ್ಯ ಸುರಕ್ಷಾ ಅಧಿಕಾರಿಗಳು, ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳು, ಆರೋಗ್ಯ ನಿರೀಕ್ಷಣಾಧಿಕಾರಿಗಳು, ಆಶಾ ಕಾರ್ಯಕರ್ತರು, ಸಮುದಾಯ ಆರೋಗ್ಯ ಅಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.