ಲಂಡನ್ : ಭಾರತ ಮತ್ತು ಆಸ್ಟ್ರೇಲಿಯಾ ಕ್ರಿಕೆಟ್ ತಂಡಗಳು ಬುಧವಾರ ಆರಂಭವಾಗಲಿರುವ ವಿಶ್ವ ಟೆಸ್ಟ್ ಚಾಂಪಿಯನ್ಷಿಪ್ ಫೈನಲ್ನಲ್ಲಿ ಮುಖಾಮುಖಿಯಾಗಲಿದೆ. ರೋಹಿತ್ ಶರ್ಮ ಬಳಗವು ಪ್ಯಾಟ್ ಕಮಿನ್ಸ್ ನೇತೃತ್ವದ ಆಸ್ಟ್ರೇಲಿಯಾವನ್ನು ಓವಲ್ ಕ್ರೀಡಾಂಗಣದಲ್ಲಿ ಎದುರಿಸಲಿದೆ.
ಇತ್ತೀಚೆಗೆ ಐಪಿಎಲ್ನಲ್ಲಿ ರನ್ಗಳ ಹೊಳೆ ಹರಿಸಿದ್ದ ಶುಭಮನ್ ಗಿಲ್, ವಿರಾಟ್ ಕೊಹ್ಲಿ ಹಾಗೂ ಟೆಸ್ಟ್ ಪರಿಣತ ಚೇತೇಶ್ವರ್ ಪೂಜಾರ ತಮ್ಮ
ಸಾಮರ್ಥ್ಯಕ್ಕೆ ತಕ್ಕಂತೆ ಆಡುವ ನಿರೀಕ್ಷೆ ಇದೆ. ರೋಹಿತ್ ಲಯಕ್ಕೆ ಮರಳಿದರೆ ತಂಡದ ಬಲ ಹೆಚ್ಚುವುದು ಖಚಿತ. ಮಧ್ಯಮ ಕ್ರಮಾಂಕದಲ್ಲಿ ಅಜಿಂಕ್ಯ ರಹಾನೆ ಅವಕಾಶ ಗಿಟ್ಟಿಸುವ ಸಾಧ್ಯತೆ ಇದೆ. ಪ್ಯಾಟ್ ಕಮಿನ್ಸ್, ಮಿಚೆಲ್ ಸ್ಟಾರ್ಕ್, ಸ್ಕಾಟ್ ಬೊಲಾಂಡ್ ಹಾಗೂ ಸ್ಪಿನ್ನರ್ ನೇಥನ್ ಲಯನ್ ಅವರ ಬೌಲಿಂಗ್ ಎದುರಿಸುವ ಸವಾಲು ಅವರ ಮುಂದಿದೆ.ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಅನುಭವಿ ಉಮೇಶ್ ಯಾದವ್ ಹಾಗೂ ಆಲ್ರೌಂಡರ್ ಶಾರ್ದೂಲ್ ಠಾಕೂರ್ ಸಂಯೋಜನೆಯೊಂದಿಗೆ ತಂಡವು ಕಣಕ್ಕಿಳಿಯುವ ನಿರೀಕ್ಷೆ ಇದೆ. ಆಸ್ಟ್ರೇಲಿಯಾ ತಂಡಕ್ಕೆ ಉಸ್ಮಾನ್ ಖ್ವಾಜಾ, ಸ್ಟೀವ್ ಸ್ಮಿತ್, ಡೇವಿಡ್ ವಾರ್ನರ್ ಹಾಗೂ ಮಾರ್ನಸ್ ಲಾಬುಷೇನ್ ಬ್ಯಾಟಿಂಗ್ ಬಲವಿದೆ. ಭಾರತವು ಕಳೆದ ಒಂದು ದಶಕದಿಂದ ಐಸಿಸಿ ಟ್ರೋಫಿ ಗೆಲುವಿನ ಬರ ಎದುರಿಸುತ್ತಿದೆ. 2013ರಲ್ಲಿ ಇಂಗ್ಲೆಂಡ್ನಲ್ಲಿ ಮಹೇಂದ್ರಸಿಂಗ್ ಧೋನಿ ಬಳಗವು ಚಾಂಪಿಯನ್ಸ್ ಟ್ರೋಫಿ ಗೆದ್ದಿತ್ತು.
ಮೊದಲ ಡಬ್ಲ್ಯುಟಿಸಿ ಫೈನಲ್ನಲ್ಲಿಯೂ ಫೈನಲ್ನಲ್ಲಿ ವಿರಾಟ್ ಕೊಹ್ಲಿ ನಾಯಕತ್ವದ ಭಾರತ ತಂಡವು ಸೋತಿತ್ತು. ಪಂದ್ಯ ಆರಂಭ: ಅ.3 ರಿಂದ