ಬೆಂಗಳೂರು: ಕೋವಿಡ್ ಹಿನ್ನಲೆಯಲ್ಲಿ ಕ್ರಿಸ್ಮಸ್ ಹಾಗೂ ಹೊಸ ವರ್ಷಾಚರಣೆಗೆ ಯಾವುದೇ ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಕೋವಿಡ್–19ರ ಪರಿಸ್ಥಿತಿ ಕುರಿತು ಉನ್ನತ ಮಟ್ಟದ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿದೆ. ಜನಸಂದಣಿ ಹೆಚ್ಚು ಇರುವ ಪ್ರದೇಶಗಳಲ್ಲಿ ಮಾಸ್ಕ್ ಧರಿಸಬೇಕು. ಕೋವಿಡ್ಗೆ ಸಂಬಂಧಿಸಿದಂತೆ ತಾಂತ್ರಿಕ ಸಲಹಾ ಸಮಿತಿ ನೀಡುವ ಸಲಹೆಯನ್ನು
ಸರ್ಕಾರ ಅನುಸರಿಸಲಿದೆ. ಕರ್ನಾಟಕದಲ್ಲಿ ಪ್ರಸ್ತುತ 92 ಸಕ್ರಿಯ ಪ್ರಕರಣಗಳು ವರದಿಯಾಗಿವೆ. ಇದರಲ್ಲಿ ಬೆಂಗಳೂರಿನಲ್ಲೇ 80 ಪ್ರಕರಣಗಳಿವೆ. 72 ಜನ ಮನೆಯಲ್ಲೇ ಪ್ರತ್ಯೇಕವಾಸದಲ್ಲಿದ್ದಾರೆ. 20 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನೆರೆಯ ಕೇರಳದಲ್ಲಿ 2041, ತಮಿಳುನಾಡಿನಲ್ಲಿ 77, ಮಹಾರಾಷ್ಟ್ರದಲ್ಲಿ 35, ಗೋವಾದಲ್ಲಿ 23 ಹಾಗೂ ಗುಜರಾತ್ನಲ್ಲಿ 12 ಸಕ್ರಿಯ ಪ್ರಕರಣಗಳು ವರದಿಯಾಗಿವೆ’ ಎಂದು ಮುಖ್ಯಮಂತ್ರಿ ಮಾಹಿತಿ ನೀಡಿದ್ದಾರೆ.‘ರಾಜ್ಯದಲ್ಲಿ ಕೋವಿಡ್ ಪರೀಕ್ಷಾ ಪ್ರಮಾಣ ದಿನಕ್ಕೆ 5 ಸಾವಿರಕ್ಕೆ ಹೆಚ್ಚಿಸಲಾಗಿದೆ. ಇದರಲ್ಲಿ 1500 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್ ಹಾಗೂ 3500 ಆರ್ಟಿಪಿಸಿಆರ್ ಪರೀಕ್ಷೆಗಳಿವೆ. ಜನರು ಆತಂಕ ಪಡುವ ಅಗತ್ಯವಿಲ್ಲ. ಆದರೆ ಅಗತ್ಯವಾಗಿ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಬೇಕು. ಸರ್ಕಾರವೂ ಎಲ್ಲಾ ರೀತಿಯ ಅಗತ್ಯ ಮುನ್ನೆಚ್ಚರಿಕೆ ವಹಿಸಲಿದೆ ಎಂದು ಹೇಳಿದ್ದಾರೆ. ಕರೊನಾ ಸೋಂಕುನ ಉಪತಳಿ ಪತ್ತೆಯಾದ ಮತ್ತು ಕೊರೊನಾ ಪ್ರಕರಣಗಳು ಏರಿಕೆಯಾಗುತ್ತಿರುವ ಕಾರಣ
ಆರೋಗ್ಯ ತಜ್ಞರು ಜತೆಗಿನ ಸಭೆ ನಟೆಸಿದ್ದಾರೆ. ಈ ವೈರಸ್ಗೆ ಭಯಪಡುವ ಹಾಗೂ ಆತಂಕ ಪಡುವ ಅಗತ್ಯ ಸದ್ಯಕ್ಕೆ ಇಲ್ಲ. ಆದರೆ ಎಚ್ಚರಿಕೆ ವಹಿಸುವುದು ಅಗತ್ಯವಾಗಿದೆ.ಹೊಸ ವರ್ಷ ಹಾಗೂ ಕ್ರಿಸ್ಮಸ್ ಹಬ್ಬಕ್ಕೆ ಯಾವುದೇ ನಿಯಮ ಇಲ್ಲ. ಆದರೆ, ಜನಸಂದಣಿಯಲ್ಲಿ ಮಾಸ್ಕ್ ಹಾಕಿಕೊಳ್ಳಿ. ಕರೊನಾಗೆ ಯಾವುದೇ ಭಯ ಪಡುವ ಅಗತ್ಯವಿಲ್ಲ. 60 ವರ್ಷಕ್ಕಿಂತ ಮೇಲೆ ಪಟ್ಟವರು ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ. ಆದರೆ ಮಾಸ್ಕ್ ಧರಿಸಿ ಎಂದು ನಾವು ಸಲಹೆ ನೀಡುತ್ತೇವೆ. ಆದರೆ ಮಾಸ್ಕ್ ಕಡ್ಡಾಯ ಎನ್ನುವ ಪರಿಸ್ಥಿತಿ ಸದ್ಯಕ್ಕೆ ಇಲ್ಲ ಎಂದು ತಿಳಿಸಿದ್ದಾರೆ. ವೆಂಟಿಲೇಟರ್, ಆಕ್ಸಿಜನ್ಗೆ ಯಾವುದೇ ಕೊರತೆ ಆಗಬಾರದು. ಎಲ್ಲಾ ಆಸ್ಪತ್ರೆಯಲ್ಲಿಯೂ ಕರೊನಾ ಕುರಿತಾಗಿ ಸಿದ್ಧತೆ ಮಾಡಿಕೊಳ್ಳಿ. ಅಗತ್ಯ ವಿದ್ದರೆ ವ್ಯಾಕ್ಸಿನೇಷನ್ ಪ್ರಾರಂಭಿಸಲಾಗುತ್ತದೆ. ಇಂದು ತಜ್ಞರ ಸಲಹೆಗಳನ್ನು ಪಡೆದಿದ್ದೇವೆ. ಈ ಹಿಂದೆ ಮಾಡಿದ ತಪ್ಪು ಮರುಕಳಿಸಬಾರದು ಎಂದು ಅಧಿಕಾರಿಗಳಿಗೆ ಖಡಕ್ ಆಗಿ ಹೇಳಿದ್ದೇನೆ ಎಂದು ಹೇಳಿದರು.












