ಸುಬ್ರಹ್ಮಣ್ಯ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಕುಕ್ಕೆ ಸುಬ್ರಹ್ಮಣ್ಯ ಕ್ಕೆ ಆಗಮಿಸಿದ್ದಾರೆ. ಧರ್ಮಸ್ಥಳ ಕ್ಷೇತ್ರ ದರ್ಶನ ಪಡೆದ ಬಳಿಕ ಸುಬ್ರಹ್ಮಣ್ಯಕ್ಕೆ ಆಗಮಿಸಿದರು. ಯಡಿಯೂರಪ್ಪ ಅವರನ್ನು
ಶಾಸಕಿ ಭಾಗೀರಥಿ ಮುರುಳ್ಯ ಸ್ವಾಗತಿಸಿದರು. ಶಾಲು ಹೊದಿಸಿ, ಹೂಗುಚ್ಛ ನೀಡಿ ಬರಮಾಡಿಕೊಳ್ಳಲಾಯಿತು. ಮಾಜಿ ಸಚಿವ ಎಸ್.ಅಂಗಾರ ಅವರು ಬಿಎಸ್ವೈ ಅವರಿಗೆ ಗೂಗುಚ್ಛ ನೀಡಿ ಸ್ವಾಗತ ಕೋರಿದರು. ದೇವಸ್ಥಾನದ ವತಿಯಿಂದ ಅಧಿಕಾರಿಗಳು ಸ್ವಾಗತಿಸಿದರು.
ಯಡಿಯೂರಪ್ಪ ಅವರು ದೇವಸ್ಥಾನದಲ್ಲಿ ತುಲಾಭಾರ ಮಹಾಭಿಷೇಕ ಮಹಾಪೂಜೆ ಸೇವೆ ನಡೆಸಲಿದ್ದಾರೆ.ಮಧ್ಯಾಹ್ನ ಸುಳ್ಯಕ್ಕೆ ಆಗಮಿಸುವ ಯಡಿಯೂರಪ್ಪ ಅವರು ಸುಳ್ಯದ ಬಿಜೆಪಿ ಕಚೇರಿಯನ್ನು ಉದ್ಘಾಟಿಸಲಿದ್ದಾರೆ. ಬಳಿಕ ಬೆಂಗಳೂರಿಗೆ ತೆರಳುವರು.