ಸುಳ್ಯ: ಸುಳ್ಯ ಹಳೆಗೇಟು ಹೊಸಗದ್ದೆಯ ಶ್ರೀ ದುರ್ಗಾಶಕ್ತಿ ಸೇವಾ ಬಳಗದ ವತಿಯಿಂದ ಚೆನ್ನಕೇಶವ ದೇವರ ಪಟ್ಟಣ ಸವಾರಿಯ ಅಂಗವಾಗಿ ಹೊಸಗದ್ದೆ ವಸಂತ ಕಟ್ಟೆಯಲ್ಲಿ ಶ್ರೀ ದೇವರ ಪೂಜಾ ಕಾರ್ಯಕ್ರಮದ ಪ್ರಯುಕ್ತ ಸಾಂಸ್ಕೃತಿಕ ಸಂಭ್ರಮ ಹಮ್ಮಿಕೊಳ್ಳಲಾಗಿತ್ತು. ವಾಯ್ಸ್ ಆಫ್ ಆರಾಧನಾ ಬಳಗ ಮತ್ತು ಯಕ್ಷಾರಾಧನಾ ಬಳಗ ಮೂಡಬಿದ್ರೆ ಇವರಿಂದ ಯಕ್ಷ ಸಾಂಸ್ಕೃತಿಕ ಸಂಭ್ರಮದ ಅಂಗವಾಗಿ ಮಹಿಷಾಸುರ ಮರ್ಧಿನಿ ಮಕ್ಕಳ ಯಕ್ಷಗಾನ ಪ್ರದರ್ಶನಗೊಂಡಿತು. ಹಾಡು, ನೃತ್ಯ ಸೇರಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.









