ಪಂಜ:ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಾಲಯದ ವರ್ಷಾವಧಿ ಜಾತ್ರೋತ್ಸವದ ಅಂಗವಾಗಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಯಕ್ಷ ಮಿತ್ರರು ಪಂಜ ಇದರ ಆಶ್ರಯದಲ್ಲಿ ಸಸಿಹಿತ್ಲು ಶ್ರೀ ಭಗವತಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಸಸಿಹಿತ್ಲು ಮಂಗಳೂರು ಇವರಿಂದ ಮುಗುರು ಮಲ್ಲಿಗೆ ಯಕ್ಷಗಾನ ಬಯಲಾಟ
ಪ್ರದರ್ಶನ ನಡೆಯಿತು. ಕಾರ್ಯಕ್ರಮದಲ್ಲಿ ಮೇಳದ ಯಕ್ಷಗಾನ ಕಲಾವಿದ ಗುಡ್ಡಪ್ಪ ಸುವರ್ಣ ಪಂಬೆತ್ತಾಡಿ ಅವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.ಉತ್ಸವ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂರು, ವ್ಯವಸ್ಥಾಪನಾ ಸಮಿತಿಯ ನಿಕಟಪೂರ್ವ ಅಧ್ಯಕ್ಷ ಪದ್ಮನಾಭ ರೈ, ಶ್ರೀ ಶಾರದಾಂಬಾ ಭಜನಾ ಮಂಡಳಿಯ ಅಧ್ಯಕ್ಷ ಬಾಲಕೃಷ್ಣ ಪುತ್ಯ, ಮಿತ್ರಮಂಡಲ ನಾಗತೀರ್ಥ ಇದರ ಅಧ್ಯಕ್ಷ ಪುರುಷೋತ್ತಮ ಆಚಾರ್ಯ ಉಪಸ್ಥಿತರಿದ್ದರು.









