ಹಾಂಗ್ಝೌ:ಆರಂಭಿಕ ಬ್ಯಾಟರ್ ಯಶಸ್ವಿ ಜೈಸ್ವಾಲ್ ಸಿಡಿಸಿದ ಸ್ಪೋಟಕ ಶತಕದ ನೆರವಿನಿಂದ ಏಷ್ಯನ್ ಗೇಮ್ಸ್ ಕ್ರಿಕೆಟ್ನಲ್ಲಿ ನೇಪಾಳದ ವಿರುದ್ಧ ಭಾರತ ಬೃಹತ್ ಮೊತ್ತ ಪೇರಿಸಿದೆ. ಟಾಸ್ ಗೆದ್ದು ಮೊದಲು ಬ್ಯಾಟ್
ಮಾಡಿದ ಭಾರತ 20 ಓವರ್ಗಳಲ್ಲಿ 4 ವಿಕೆಟ್ ನಷ್ಟಕ್ಕೆ 202 ರನ್ ಗಳಿಸಿದೆ. ಜೈಸ್ವಾಲ್ 49 ಎಸೆತಗಳಲ್ಲಿ 8 ಬೌಂಡರಿ ಹಾಗೂ 7 ಸಿಕ್ಸರ್ ನೆರವಿನಿಂದ 100 ರನ್ ಗಳಿಸಿದರು.ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಜೈಸ್ವಾಲ್ ಅವರ ಚೊಚ್ಚಲ ಶತಕ ಇದಾಗಿದೆ. ಸಿಕ್ಸರ್, ಬೌಂಡರಿ ಮಳೆ ಸುರಿಸಿದ ಜೈಸ್ವಾಲ್ ತನ್ನ ಮೊದಲ ಅಂತಾರಾಷ್ಟ್ರೀಯ ಟಿ20 ಶತಕವನ್ನು ಸ್ಮರಣೀಯವಾಗಿಸಿದರು.ರಿತುರಾಜ್ ಗಾಯಕ್ವಾಡ್ 23, ಶಿವಂ ದುಬೆ 25 ರನ್ ಗಳಿಸಿದರು. ಅಂತಿಮ ಹಂತದಲ್ಲಿ ಸಿಡಿದ ರಿಂಕು ಸಿಂಗ್ 15 ಎಸೆತಗಳಲ್ಲಿ 4 ಸಿಕ್ಸರ್ ಹಾಗೂ 2 ಬೌಂಡರಿ ನೆರವಿನಿಂದ ಅಜೇಯ 37 ರನ್ ಬಾರಿಸಿದರು.