ಧರ್ಮಸ್ಥಳ:ಕನ್ನಡ ನಟ, ರಾಕಿಂಗ್ ಸ್ಟಾರ್ ಯಶ್ ಅವರು ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ-ಪ್ರಾರ್ಥನೆ ಸಲ್ಲಿಸಿದ್ದಾರೆ. ನಾಳೆ, 26 ಆಗಸ್ಟ್ 2026ರಂದು ಜಗತ್ತಿನಾದ್ಯಂತ ತಮ್ಮ ನಟನೆ-ನಿರ್ಮಾಣದ ಟಾಕ್ಸಿಕ್ ಸಿನಿಮಾ ಬಿಡುಗಡೆ ಹಿನ್ನೆಲೆಯಲ್ಲಿ
ಯಶ್ ಅವರು ಇಂದು ಧರ್ಮಸ್ಥಳಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದ್ದಾರೆ.ಈ ವೇಳೆ ನಟ ಯಶ್ ಅವರು ‘ಎಲ್ಲರಿಗೂ ಒಳ್ಳೆಯದಾಗಲಿ, ಮುಂಜುನಾಥ ಸ್ವಾಮಿಯ ಅನುಗ್ರಹ ಎಲ್ಲರ ಮೇಲೆ ಇರಲಿ.. ನಾನು ಯಾವಾಗ್ಲೂ ಬರ್ತೀನಿ, ಪ್ರತಿ ವರ್ಷ ಬರ್ತೀನಿ.. ನನ್ನ ಎಲ್ಲಾ ಸಿನಿಮಾ ಬಿಡುಗಡೆ ಸಮಯದಲ್ಲೂ ಬರ್ತಿನಿ.. ಈ ಬಾರಿ ಸಿನಿಮಾ ಬಿಡುಗಡೆ ಹಿಂದಿನ ದಿನ ಇಲ್ಲಿಗೆ ಬರುವ ಅವಕಾಶ ಸಿಕ್ತು.. ಸಿನಿಮಾ ಬಿಡುಗಡೆಯ

ಎಲ್ಲಾ ಕೆಲಸಗಳನ್ನು ಮಗಿಸಿ, ಇಲ್ಲಿಗೆ ಬಂದಿದ್ದೇನೆ. ಮಂಜುನಾಥನ ಆಶೀರ್ವಾದ ಎಲ್ಲರ ಮೇಲಿರಲಿ, ಎಲ್ಲರಿಗೂ ಒಳ್ಳೆಯದಾಗಲಿ, ಜನರ ಆಶೀರ್ವಾದ ನಮ್ಮ ಮೇಲೆ ಇರಲಿ’ ಎಂದಿದ್ದಾರೆ.
ಬಳಿಕ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.ಕ್ಷೇತ್ರದ ಪರವಾಗಿ ಯಶ್ ಅವರನ್ನು ಹೆಗ್ಗಡೆಯವರು ಶಾಲು ಹೊದಿಸಿ, ಸ್ಮರಣಿಕೆ ನೀಡಿ ಗೌರವಿಸಿದರು.
ಶ್ರೀ ಸನ್ನಿಧಿ ಅತಿಥಿಗೃಹದಲ್ಲಿ ಭೋಜನ ಸ್ವೀಕರಿಸಿ ಬಳಿಕ ಪ್ರಯಾಣ ಮುಂದುವರಿಸಿದರು.ಯಶ್ ಬೀಡಿಗೆ ಬಂದಾಗ, ಡಿ. ಹರ್ಷೇಂದ್ರಕುಮಾರ್ ಅವರನ್ನು ಹಾರ ಹಾಕಿ ಸ್ವಾಗತಿಸಿದರು.









