ಸುಳ್ಯ: ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರಾದ ಯತೀಂದ್ರ ಸಿದ್ದರಾಮಯ್ಯ ಅವರು ಸಚಿವ ಸಂಪುಟ ಸಭೆಯಲ್ಲಿ ಭಾಗವಹಿಸಲು ಮಂಗಳೂರಿಗೆ ತೆರಳುವ ಹಾದಿಯಲ್ಲಿ ಸುಳ್ಯಕ್ಕೆ ಭೇಟಿ ನೀಡಿದರು.ಸುಳ್ಯ ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಕೆ. ಎಂ. ಮುಸ್ತಫ ಸಚಿವರನ್ನು ಸ್ವಾಗತಿಸಿದರು.ಈ ಸಂದರ್ಭದಲ್ಲಿ
ಸಚಿವರ ಗಮನಕ್ಕೆ ಕೆಲವು ಸಮಸ್ಯೆ ಗಳನ್ನು ಪ್ರಸ್ತಾಪಿಸಲಾಯಿತು.ಸಚಿವರು ನಾಳೆ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಿಗದಿಯಾಗಿದ್ದು ಈ ಬಗ್ಗೆ ಗಮನ ಹರಿಸುವುದಾಗಿ ತಿಳಿಸಿದರು.ಈ ಸಂದರ್ಭದಲ್ಲಿ ಸುಳ್ಯ ವಾಲಿಬಾಲ್ ಅಸೋಸಿಯೇಷನ್ ಉಪಾಧ್ಯಕ್ಷ ಕೆ. ಬಿ. ಇಬ್ರಾಹಿಂ,ಸುಳ್ಯ ತಾಲೂಕು ಆಸ್ಪತ್ರೆ ಆರೋಗ್ಯ ರಕ್ಷಾ ಸಮಿತಿ ಸದಸ್ಯ ಶಹೀದ್ ಪಾರೆ ಮತ್ತು ಸಚಿವರ ಆಪ್ತ ಸಹಾಯಕರಾದ ಶಿವ ಸ್ವಾಮಿ ಮೊದಲಾದವರು ಉಪಸ್ಥಿತರಿದ್ದರು











