ಸುಳ್ಯ: ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದರೆ ಸುಳ್ಯ ಭಾಗದಲ್ಲಿ ಸಂಪೂರ್ಣ ಅಡಿಕೆ ಕೃಷಿ ನಾಶವಾಗಲು ಕಾರಣವಾಗಿರುವ ಹಳದಿ ರೋಗ, ಎಲೆ ಚುಕ್ಕಿ ರೋಗದ ಬಗ್ಗೆ ಸಂಪೂರ್ಣ ಸಂಶೋಧನೆ ನಡೆಸಿ ಪರಿಹಾರ ಕಂಡು ಕೊಳ್ಳಲಾಗುವುದು. ಇದಕ್ಕಾಗಿ 100 ಕೋಟಿ ಅನುದಾನ ಮೀಸಲಿರಿಸಲಾಗುವುದು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.ಸುಳ್ಯದಲ್ಲಿ ನಡೆದ ಬೃಹತ್ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.ಬಿಜೆಪಿ ಸರಕಾರ ಬಂದರೂ ಅಡಿಕೆ ಹಳದಿ
ರೋಗದಿಂದ ಕೃಷಿ ನಾಶವಾದ ಕೃಷಿಕರಿಗೆ ಯಾವುದೇ ಪರಿಹಾರ ನೀಡಿಲ್ಲ.ಸಂಶೋಧನೆ ನಡೆಸಿ ಸೂಕ್ತ ಪರಿಹಾರ ಕಂಡು ಹುಡುಕಿಲ್ಲ ಎಂದರು. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಸಂಶೋಧನೆ ನಡೆಸಿ ಸೂಕ್ತ ಪರಿಹಾರ ಕಂಡು ಕೊಳ್ಳಲಾಗುವುದು ಮತ್ತು ಕೃಷಿಕರಿಗೆ ಪರಿಹಾರ ನೀಡಲಾಗುವುದು ಎಂದರು. ಸುಳ್ಯ ಕೊಡಿಯಾಲಬೈಲ್ ರಸ್ತೆ ಅತೀ ಮುಖ್ಯವಾದ ರಸ್ತೆಯಾದರೂ ಅದರ ಅಭಿವೃದ್ಧಿ ನಡೆಸಿಲ್ಲ. 29 ವರ್ಷಗಳಿಂದ ಬಿಜೆಪಿ ಶಾಸಕರಿದ್ದರೂ ಈ ರಸ್ತೆ ಅಭಿವೃದ್ಧಿ ಮಾಡಿಲ್ಲ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ ಗಮನ ಸೆಳೆದರು.ಈ ಭಾಗದ ರಸ್ತೆ ಹಾಗು ಮೂಲಭೂತ ಅಭಿವೃದ್ಧಿಗೆ ಕಾಂಗ್ರೆಸ್ ಒತ್ತು ನೀಡಲಿದೆ ಎಂದರು. ಜಿಲ್ಲೆಯಲ್ಲಿ ಬಡವರಿಗಾಗಿ ಮೆಡಿಕಲ್ ಕಾಲೇಜು ಸ್ಥಾಪನೆ ಮಾಡಲಾಗುವುದು ಎಂದು ಅವರು ಹೇಳಿದರು.
ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಧನಂಜಯ ಅಡ್ಪಂಗಾಯ, ಕೆಪಿಸಿಸಿ ವಕ್ತಾರ ಟಿ.ಎಂ.ಶಹೀದ್ ತೆಕ್ಕಿಲ್, ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ, ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ, ಪ್ರಧಾನ ಕಾರ್ಯದರ್ಶಿ ಪಿ.ಎಸ್.ಗಂಗಾಧರ, ಪ್ರಚಾರ ಸಮಿತಿ ಅಧ್ಯಕ್ಷ ಸದಾನಂದ ಮಾವಜಿ, ಕಾಂಗ್ರೆಸ್ ಮುಖಂಡರಾದ ಡಾ.ರಘು, ಎನ್.ಜಯಪ್ರಕಾಶ್ ರೈ, ಮಹಮ್ಮದ್ ಮಸೂದ್, ಕೋಡಿಜಾಲ್ ಇಬ್ರಾಹಿಂ, ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಎಂ.ವೆಂಕಪ್ಪ ಗೌಡ, ಎಐಸಿಸಿ ವೀಕ್ಷಕಿ ಶೀಬಾ ರಾಮಚಂದ್ರನ್, ಮಹಾರಾಷ್ಟ್ರದ ಮಾಜಿ ಸಚಿವ ಸುನಿಲ್ ಕೇದಾರ್, ಶಾಲೆಟ್ ಪಿಂಟೋ, ಗೀತಾ ಕೋಲ್ಚಾರ್, ಎಂ.ಎಸ್.ಮಹಮ್ಮದ್, ಇಸ್ಮಾಯಿಲ್ ಪಡ್ಪಿನಂಗಡಿ ಲುಕ್ಮಾನ್ ಬಂಟ್ವಾಳ್, ಸವಾದ್ ಸುಳ್ಯ, ಶಾಹುಲ್ ಹಮೀದ್ ಕುತ್ತಮೊಟ್ಟೆ, ಸರಸ್ವತಿ ಕಾಮತ್, ವಹಿದಾ ಇಸ್ಮಾಯಿಲ್, ಕಾವು ಹೇಮನಾಥ ಶೆಟ್ಟಿ, ಕೆ.ಎಂ.ಮುಸ್ತಫ, ಪಿ.ಎ.ಮಹಮ್ಮದ್ ಎಸ್.ಸಂಶುದ್ದೀನ್, ರಾಜೀವಿ ಆರ್ ರೈ, ಪಿ.ಪಿ.ವರ್ಗೀಸ್, ಶರೀಫ್ ಕಂಠಿ, ಶಾಫಿ ಕುತ್ತಮೊಟ್ಟೆ, ಸಿದ್ದಿಕ್ ಕೊಕ್ಕೊ ಮತ್ತಿತರರು ಉಪಸ್ಥಿತರಿದ್ದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ ಸ್ವಾಗತಿಸಿ, ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ ಕಾರ್ಯಕ್ರಮ ನಿರೂಪಿಸಿದರು.