ಸುಳ್ಯ: ಸುಳ್ಯ ಭಾಗದಲ್ಲಿ ವ್ಯಾಪಕವಾಗಿರುವ ಅಡಿಕೆ ಹಳದಿ ರೋಗದ ಕುರಿತು ಸಮಗ್ರ ಸಂಶೋಧನೆ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಸರಕಾರದ ಮಟ್ಟದಲ್ಲಿ ಚರ್ಚೆ ನಡೆಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಸುಳ್ಯದಲ್ಲಿ ನಡೆದ
ಟಿ.ಎಂ.ಶಹೀದ್ ಅಭಿನಂದನಾ ಸಮಾರಂಭಕ್ಕೆ ಆಗಮಿಸಿದ ಸಚಿವರಿಗೆ ಅಡಿಕೆ ಹಳದಿ ರೋಗಕ್ಕೆ ಪರಿಹಾರ ಒದಗಿಸಬೇಕು ಎಂದು
ಟಿ.ಎಂ.ಶಹೀದ್ ತೆಕ್ಕಿಲ್ ಮನವಿ ಸಲ್ಲಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು ಅಡಿಕೆ ಎಲೆ ಹಳದಿ ರೋಗದ ಕುರಿತು ಶಾಶ್ಚತವಾದ ಪರಿಹಾರ ಕಂಡುಕೊಳ್ಳಬೇಕು. ಅದಕ್ಕಾಗಿ ಸಂಶೋಧನೆ ಆಗಬೇಕಾಗಿದೆ. ಜೊತೆಗೆ ಪರಿಹಾರವೂ ಬೇಕಾಗಿದೆ. ಈ ನಿಟ್ಟಿನಲ್ಲಿ ಸರಕಾರದ ಮಟ್ಟದಲ್ಲಿ ಚರ್ಚೆ ನಡೆಸುತ್ತೇವೆ ಎಂದು ಸಚಿವರು ತಿಳಿಸಿದರು. ಮಂಗಳೂರಿನಲ್ಲಿ ನಡೆದ ಕೆಡಿಪಿ ಸಭೆಯಲ್ಲಿಯೂ ಅಡಿಕೆ ಎಲೆ ಹಳದಿ ರೋಗದ ಕುರಿತು ಚರ್ಚೆ ನಡೆಸಲಾಗಿದೆ ಎಂದು ಸಚಿವರು ಹೇಳಿದರು