ಸುಳ್ಯ:ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಹಳದಿ ರೋಗ ಹಾಗೂ ಎಲೆಚುಕ್ಕಿರೋಗ ಬಾಧೆಯಿಂದ ನಷ್ಟ ಉಂಟಾಗಿರುವ ಕೃಷಿಕರಿಗೆ ಪರಿಹಾರವಾಗಿ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು ಎಂದು ಸಾಮಾಜಿಕ ಕಾರ್ಯಕರ್ತ ಸುಪ್ರೀತ್ ಮೋಂಟಟ್ಕ ಕೃಷಿ
ಸಚಿವ ಎನ್. ಚೆಲುವರಾಯಸ್ವಾಮಿ ಅವರಿಗೆ
ಮನವಿ ಸಲ್ಲಿಸಿದರು.ಈ ಬಾರಿ ರಾಜ್ಯ ಬಜೆಟ್ನಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರಕ್ಕೆ ವಿಶೇಷ ಪ್ಯಾಕೇಜ್ ಘೋಷಿಸುವಂತೆ ಮನವಿ ಸಲ್ಲಿಸಲಾಯಿತು. ಹಳದಿ ಹಾಗೂ ಎಲೆಚುಕ್ಕಿ ರೋಗದಿಂದ ಕೃಷಿಕರು ಆರ್ಥಿಕವಾಗಿ ಸಂಕಷ್ಟಕ್ಕೊಳಗಾಗಿದ್ದಾರೆ. ಈ ಕ್ಷೇತ್ರದ ಬಹುತೇಕ ಜನರು ಕೃಷಿಯನ್ನೇ ಅವಲಂಬಿಸಿ ಜೀವನ ನಡೆಸುತ್ತಿದ್ದು, ವಿಶೇಷವಾಗಿ ಅಡಿಕೆ ಬೆಳೆ ಮುಖ್ಯ ಆದಾಯದ ಮೂಲವಾಗಿದೆ. ಇತ್ತೀಚಿನ ದಿನಗಳಲ್ಲಿ ರೋಗಬಾಧೆಯಿಂದ ಬೆಳೆ ನಾಶವಾಗುತ್ತಿದ್ದು, ಕೃಷಿಕರ ಜೀವನೋಪಾಯ ಕಷ್ಟಕರ ಪರಿಸ್ಥಿತಿಗೆ ತಲುಪಿದೆ. ಆದ್ದರಿಂದ ಈ ಬಾರಿ ಬಜೆಟ್ನಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಲು ವಿನಂತಿಸಲಾಗಿದೆ.






