ಬೆಳ್ಳಾರೆ:ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆ ಪ್ರಾಥಮಿಕ ವಿಭಾಗದಲ್ಲಿ ದಿನಾಂಕ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯ ಗುರುಗಳಾದ ಮಾಯಿಲಪ್ಪ ಜಿ ವಹಿಸಿದ್ದರು. ಕಾರ್ಯಕ್ರಮದಲ್ಲಿ ಅತಿಥಿಯಾಗಿ ಎಸ್ ಡಿ ಎಂ ಸಿ ಕಾರ್ಯಾಧ್ಯಕ್ಷ ಶ್ರೀಹರ್ಷ ಜೋಗಿಬೆಟ್ಟು ಉಪಸ್ಥಿತರಿದ್ದರು.
ಶಾಲಾ ಮೈದಾನದಲ್ಲಿ ಶಾಲೆಯ ಎಲ್ಲಾ ವಿದ್ಯಾರ್ಥಿಗಳು ಸೇರಿ ಯೋಗವನ್ನು ಮಾಡುವುದರ ಮೂಲಕ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಿದರು. ಈ ಸಂದರ್ಭದಲ್ಲಿ ಶಿಕ್ಷಕರಾದ ದಿನೇಶ್ ಮಾಚಾರ್ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. ಶಾಲಾ ಶಿಕ್ಷಕರು ಸಹಕರಿಸಿದರು.
previous post