ಸುಳ್ಯ:ಕೆವಿಜಿ ಅಮರಜ್ಯೋತಿ ಪಿಯು ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಾಯಿತು.ಸಂಸ್ಥೆಯ ಟ್ರಸ್ಟಿ ಮೌರ್ಯ ಆರ್ ಕುರುಂಜಿ ಯೋಗ ದಿನಾಚರಣೆಗೆ ಚಾಲನೆ ನೀಡಿದರು. ಯೋಗದ ಮಹತ್ವವನ್ನು ಹಾಗೂ ವಿಶ್ವದಾದ್ಯಂತ ಯೋಗ ಪಸರಿಸಿರುವ ಬಗ್ಗೆ ವಿದ್ಯಾರ್ಥಿಗಳಿಗೆ ವಿವರಿಸಿದರು. ಕಾಲೇಜಿನ
ಪ್ರಾಂಶುಪಾಲರಾದ ಡಾ. ಯಶೋದಾ ರಾಮಚಂದ್ರ ಕಾರ್ಯಕ್ರಮಕ್ಕೆ ಸ್ವಾಗತಿಸಿ ಶುಭ ಹಾರೈಸಿದರು. ಯೋಗ ತರಬೇತುದಾರಾರಾ ರಾಜೇಶ್ ಮತ್ತು ನಿಶಿತಾ ಆಗಮಿಸಿ ವಿದ್ಯಾರ್ಥಿಗಳಿಗೆ ಯೋಗಭ್ಯಾಸದ ವಿವಧ ಆಸನಗಳನ್ನು ಕಲಿಸಿದರು.

ಕಾಲೇಜಿನ ಮ್ಯಾನೇಜಿಂಗ್ ಟ್ರಸ್ಟ್ ಡಾ. ರೇಣುಕಾ ಪ್ರಸಾದ್ ಕೆ ವಿ,ಟ್ರಸ್ಟಿ ಡಾ. ಜ್ಯೋತಿ ಆರ್ ಪ್ರಸಾದ್, ಕಾಲೇಜಿನ ಸಿ ಇ ಒ ಡಾ. ಉಜ್ವಲ್ ಯು ಜೆ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.ಕಾರ್ಯಕ್ರಮದಲ್ಲಿ ಉಪ ಪ್ರಾಂಶುಪಾಲರಾದ ದೀಪಕ್ ವೈ ಆರ್, ಎಲ್ಲಾ ವಿದ್ಯಾರ್ಥಿಗಳು ಹಾಗೂ ಎಲ್ಲಾ ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಯಾಶಿರ ಸ್ವಾಗತಿಸಿ ಮಿಶ ವಂದಿಸಿದರು ಹಾಗೂ ಉಪನ್ಯಾಸಕಿ ಮಲ್ಲಿಕಾ ಎಂ ಎಲ್ ಕಾರ್ಯಕ್ರಮ ನಿರೂಪಿಸಿದರು.