ಶ್ರೀನಗರ: ಪ್ರಧಾನಿ ನರೇಂದ್ರ ಮೋದಿ ಶ್ರೀನಗರದಲ್ಲಿ ನಡೆದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಯೋಗವು ಜ್ಞಾನ ಮಾತ್ರವಲ್ಲ ವಿಜ್ಞಾನವು ಕೂಡ ಆಗಿದೆ, ಯೋಗದ ಪ್ರಯಾಣ ಮುಂದುವರೆಯುತ್ತಿದೆ, ಇಂದು ಜಗತ್ತಿನಲ್ಲಿ ಯೋಗ
ಮಾಡುವವರ ಸಂಖ್ಯೆ ನಿರಂತರವಾಗಿ ಹೆಚ್ಚಾಗುತ್ತಿದೆ.
ಯೋಗ ಇಂದು ಜಾಗತಿಕ ಮಟ್ಟದಲ್ಲಿ ಮನ್ನಣೆ ಗಳಿಸಿದೆ. ಯೋಗಾಭ್ಯಾಸದಿಂದ ಅನೇಕ ರೋಗಗಳಿಗೆ ಮುಕ್ತಿ ಸಿಗಲಿದೆ, ರೋಗಗಳು ಗುಣಮುಖವಾಗುವ ಬಗ್ಗೆ ವೈಜ್ಞಾನಿಕವಾಗಿ ದೃಢಪಟ್ಟಿದೆ ಎಂದು ಹೇಳಿದರು.
ಆರೋಗ್ಯ ರಕ್ಷಣೆ, ಸಮಾಜ ಸ್ವಾಸ್ಥ್ಯ ಕಾಪಾಡಲು ಯೋಗ ಅತ್ಯಗತ್ಯ,ಯೋಗ ದಿನನಿತ್ಯದ ಜೀವನಕ್ಕೆ ಸಹಾಯಕವಾಗಲಿದೆ ಎಂದರು. ಇದು ಪ್ರಪಂಚದ ಜನರ ದೈನಂದಿನ ಜೀವನದ ಭಾಗವಾಗುತ್ತಿದೆ ಎಂದು ಹೇಳಿದರು.









