ಸುಳ್ಯ: ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆಯ ರಾಷ್ಟ್ರೀಯ ಸೇವಾ ಯೋಜನಾ ಘಟಕದಿಂದ 10ನೇ ವರ್ಷದ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಜನಜಾಗೃತಿ ಜಾಥಾ ನಡೆಯಿತು. ಎನ್.ಎಸ್.ಎಸ್. ಯೋಜನಾಧಿಕಾರಿ ಡಾ. ಪ್ರಮೋದ್ ಪಿ. ಎ., ಇವರ
ಮಾರ್ಗದರ್ಶನದಲ್ಲಿ ಸಂಸ್ಥೆಯ ಎನ್.ಎಸ್.ಎಸ್. ವಿದ್ಯಾರ್ಥಿಗಳು ಜನಜಾಗೃತಿ ಜಾಥಾವನ್ನು ನಡೆಸಿಕೊಟ್ಟರು.
ಈ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಲೀಲಾಧರ್ ಡಿ. ವಿ., ಸಂಸ್ಥೆಯ ವಿದ್ಯಾರ್ಥಿ ಕ್ಷೇಮಾಧಿಕಾರಿ ಡಾ. ಹರ್ಷಿತಾ ಎಂ., ಸಂಸ್ಥೆಯ ದ್ರವ್ಯಗುಣ ವಿಭಾಗದ ಪ್ರಾಧ್ಯಾಪಕರಾದ ಡಾ. ಕವಿತಾ ಬಿ. ಎಂ., ಅಗದ ತಂತ್ರ ವಿಭಾಗದ ಪ್ರಾಧ್ಯಾಪಕರಾದ ಡಾ. ಅವಿನಾಶ್ ಕೆ. ವಿ., ಪ್ರಾಧ್ಯಾಪಕರಾದ ಡಾ. ಯು. ಸಂತೋಷ್ ನಾಯಕ್, ಸ್ವಸ್ಥವೃತ್ತ ಮತ್ತು ಯೋಗ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ. ಶಭೀನಾ ಟಿ. ಟಿ., ಸಹಾಯಕ ಪ್ರಾಧ್ಯಾಪಕರಾದ ಡಾ. ಐಶ್ವರ್ಯ ಬಾಲಗೋಪಾಲ್, ಎನ್.ಎಸ್.ಎಸ್. ಯೋಜನಾಧಿಕಾರಿ ಡಾ. ಪ್ರಮೋದ್ ಪಿ. ಎ., ಹಾಗೂ ಸಂಸ್ಥೆಯ ಎನ್.ಎಸ್.ಎಸ್. ವಿದ್ಯಾರ್ಥಿಗಳು ಭಾಗವಹಿಸಿದರು.