ಸುಳ್ಯ: ವಿಶ್ವ ಯೋಗ ದಿನಾಚರಣೆಯ ಪ್ರಯುಕ್ತ ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನ ಎನ್.ಎಸ್.ಎಸ್. ಘಟಕದ ವತಿಯಿಂದ ದಿನಾಂಕ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಡಾ. ಸುರೇಶ ವಿ. ಕಾರ್ಯಕ್ರಮವನ್ನು ಉದ್ಘಾಟಿಸಿದರು. ದೈಹಿಕ ಶಿಕ್ಷಣ ನಿರ್ದೇಶಕರಾದ ಭಾಸ್ಕರ್ ಎಸ್.ಬಿ. ಯವರು ಯೋಗ ಪ್ರಾತ್ಯಕ್ಷಿತೆಯನ್ನು ಹಾಗೂ ಯೋಗದ ಆರೋಗ್ಯ
ಸುರಕ್ಷತೆಯ ಮಾಹಿತಿಯನ್ನು ವಿವರಿಸಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ಕಾಲೇಜಿನ ಸಿ.ಇ.ಒ. ಹಾಗೂ ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ
ಡಾ. ಉಜ್ವಲ್ ಯು.ಜೆ. ಮಾತನಾಡಿ ಯೋಗವು 6 ಸಾವಿರ ವರ್ಷಕ್ಕೂ ಹಳೆಯದಾದ ಭೌತಿಕ, ಮಾನಸಿಕ ಮತ್ತು ಆಧ್ಯಾತ್ಮಿಕ ಅಭ್ಯಾಸವಾಗಿದ್ದು ವಿಶ್ವದಾದ್ಯಂತ ಹೆಚ್ಚಿನ ಜನರು ತಮ್ಮ ಮಾನಸಿಕ ಒತ್ತಡ ಮತ್ತು ದೈಹಿಕ ಸೌಂದರ್ಯಕ್ಕಾಗಿ ಯೋಗದ ಮೊರೆ ಹೋಗುತ್ತಿರುವುದು ನಿಮಗೆಲ್ಲ ತಿಳಿದಿದೆ. ಇದರಿಂದ ಮನಸ್ಸು ದೇಹ ಮತ್ತು ಪ್ರಕೃತಿಯ ನಡುವೆ ಪರಿಪೂರ್ಣ ಸಾಮರಸ್ಯವನ್ನು ಬೆಸೆಯುತ್ತದೆ ಎಂದರು. ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಸುರೇಶ ವಿ.ಯವರು ಮಾತನಾಡಿ ಎಲ್ಲರಿಗೂ ಯೋಗದ ಮಹತ್ವವನ್ನು ತಿಳಿಸಿ ಶುಭ ಹಾರೈಸಿದರು. ಈ ಕಾರ್ಯಕ್ರಮದಲ್ಲಿ ಡೀನ್ ಅಕಾಡೆಮಿಕ್ ಹಾಗೂ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥ ಡಾ. ಉಮಾಶಂಕರ್ ಕೆ.ಎಸ್., ಎಲೆಕ್ಟಾçನಿಕ್ಸ್ & ಕಮ್ಯುನಿಕೇಶನ್ ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥ ಡಾ. ಕುಸುಮಾಧರ ಎಸ್., ಎಂ.ಬಿ.ಎ. ವಿಭಾಗ ಮುಖ್ಯಸ್ಥ ಪ್ರೊ. ಕೃಷ್ಣಾನಂದ ಎ, ಕಾಲೇಜಿನ ಎಲ್ಲಾ ಬೋಧಕ, ಬೋಧಕೇತರ ಸಿಬಂಧಿಗಳು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನ ಎನ್.ಎಸ್.ಎಸ್. ಘಟಕಾಧಿಕಾರಿಗಳಾದ ಡಾ. ಪ್ರಜ್ಞ ಎಂ.ಆರ್. ಮತ್ತು ಪ್ರೊ. ಸತ್ಯಜಿತ್ ಎಂ. ಕಾರ್ಯಕ್ರಮವನ್ನು ಸಂಯೋಜಿಸಿದರು.