ಉಜಿರೆ: ನಮ್ಮ ದೇಶದ ಪ್ರಾಚೀನ ಪಾರಂಪರಿಕ ಚಿಕಿತ್ಸಾ ವಿಧಾನವಾದ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಪದ್ಧತಿ ಬಗ್ಗೆ ಈಗ ಜನರಿಗೆ ನಂಬಿಕೆ ಮತ್ತು ವಿಶ್ವಾಸ ಮೂಡಿ ಬಂದಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.ಅವರು ಸೋಮವಾರ ಉಜಿರೆಯಲ್ಲಿ ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನಲ್ಲಿ ಆಯೋಜಿಸಿದ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಪದ್ಧತಿ ಬಗ್ಗೆ
ನಡೆದ ಮೂರನೆ ಅಂತಾರಾಷ್ಟ್ರೀಯ ಸಮ್ಮೇಳನದ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಅಂತಾರಾಷ್ಟ್ರೀಯ ಸಮ್ಮೇಳನವನ್ನು ಬೆಂಗಳೂರಿನ ಎಸ್ ವ್ಯಾಸ್ ವಿಶ್ವವಿದ್ಯಾಲಯದ ಕುಲಪತಿ ಡಾ. ಎಚ್. ಆರ್. ನಾಗೇಂದ್ರ ಉದ್ಘಾಟಿಸಿದರು. ಮುಖ್ಯ ಅತಿಥಿಯಾಗಿ
ಸಂಸದ ಬ್ರಿಜೇಶ್ ಚೌಟ ಮಾತನಾಡಿದರು. ಬೆಂಗಳೂರಿನ ಎಸ್ ವ್ಯಾಸ ವಿಶ್ವವಿದ್ಯಾಲಯದ ಕುಲಪತಿ ಡಾ. ಎಚ್.ಆರ್. ನಾಗೇಂದ್ರ ಅವರಿಗೆ “ಜೀವಮಾನದ ವಿಶೇಷ ಸಾಧಕ” ಪುರಸ್ಕಾರ ನೀಡಿ ಗೌರವಿಸಲಾಯಿತು.
ಬೆಂಗಳೂರಿನ ಡಾ. ನವೀನ್ ಕೆ.ವಿ., ಡಾ. ಬಾಬು ಜೋಸೆಫ್, ಡಾ. ಮಂಜುನಾಥ್, ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಿ. ಹರ್ಷೇಂದ್ರ ಕುಮಾರ್, ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನ ಪ್ರಾಂಶುಪಾಲ ಡಾ. ಪ್ರಶಾಂತ್ ಶೆಟ್ಟಿ ಉಪಸ್ಥಿತರಿದ್ದು ಶುಭಾಶಂಸನೆ ಮಾಡಿದರು.ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಪ್ರೊ. ಎಸ್. ಸತೀಶ್ಚಂದ್ರ ಸ್ವಾಗತಿಸಿದರು.ಶಾಂತಿವನದ ಮುಖ್ಯ ವೈದ್ಯಾಧಿಕಾರಿ ಡಾ. ಶಿವಪ್ರಸಾದ ಶೆಟ್ಟಿ ಧನ್ಯವಾದವಿತ್ತರು.ಡಾ. ಬಿಂದು, ಡಾ. ದೀಪಿಕಾ, ಕುಮಾರಿ ಅನನ್ಯಾ ಮತ್ತು ಕುಮಾರಿ ಪ್ರತೀಕ್ಷಾ ಕಾರ್ಯಕ್ರಮ ನಿರ್ವಹಿಸಿದರು.