ಸುಳ್ಯ: ಸುಳ್ಯದ ಶ್ರೀ ಶಾರದಾ ಮಹಿಳಾ ಪದವಿ ಪೂರ್ವ ಕಾಲೇಜು ಇಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.
ಸಮಾರಂಭದ ಅಧ್ಯಕ್ಷತೆಯನ್ನು ದಕ್ಷಿಣ ಕನ್ನಡ ಗೌಡ ವಿದ್ಯಾಸಂಘದ ಪ್ರಧಾನ ಕಾರ್ಯದರ್ಶಿ ಡಾ. ರೇವತಿ ನಂದನ್ ವಹಿಸಿ, ಜ್ಯೋತಿ ಬೆಳಗಿಸುವುದರ
ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಂಸ್ಥೆಯ ಹಳೆ ವಿದ್ಯಾರ್ಥಿನಿ, ರಾಜ್ಯಮಟ್ಟದ ಯೋಗ ಪ್ರಶಸ್ತಿ ವಿಜೇತೆ ಕು.ಸ್ವಾತಿ ಸಂಪನ್ಮೂಲ ವ್ಯಕ್ತಿಯಾಗಿ ಯೋಗ ತರಬೇತಿ ನೀಡಿ ಮಾಹಿತಿಯನ್ನು ನೀಡಿದರು.ಸಂಸ್ಥೆಯ ಪ್ರಭಾರ ಪ್ರಾಂಶುಪಾಲೆ ಸ್ವರ್ಣಕಲಾ . ಎ.ಎಸ್ ಪ್ರಾಸ್ತಾವಿಕ ಮಾತುಗಳಾಡಿದರು. ದೈಹಿಕ ಶಿಕ್ಷಣ ಉಪನ್ಯಾಸಕ ಬಾಲಚಂದ್ರ. ಕೆ .ಸ್ವಾಗತಿಸಿ, ಇತಿಹಾಸ ಉಪನ್ಯಾಸಕ ಪ್ರಸನ್ನ ಎನ್.ಎಚ್. ವಂದಿಸಿದರು. ಸಮಾಜಶಾಸ್ತ್ರ ಉಪನ್ಯಾಸಕ ಬಾಲಕೃಷ್ಣ. ಕೆ ಕಾರ್ಯಕ್ರಮ ನಿರೂಪಿಸಿದರು.