ಸುಳ್ಯ:ಕೆವಿಜಿ ಇಂಟರ್ ನ್ಯಾಷನಲ್ ಪಬ್ಲಿಕ್ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಯಿತು. ಈ ಕಾರ್ಯಕ್ರಮಕ್ಕೆ ಶಾಲಾ ಸಂಚಾಲಕ ಡಾ. ರೇಣುಕಾ ಪ್ರಸಾದ್ ಕೆ ವಿ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಉಜ್ವಲ್ ಯು ಜೆ ಶುಭ ಹಾರೈಸಿದರು.ದೀಪ ಪ್ರಜ್ವಲಿಸಿ ಪ್ರಾರ್ಥನೆಯ ಮೂಲಕ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಲಾಯಿತು. ಮುಖ್ಯ ಅತಿಥಿಗಳಾಗಿದ್ದ
ಕೆವಿಜಿ ಐಟಿಐ ಕಾಲೇಜಿನ ಪ್ರಾಂಶುಪಾಲ ಚಿದಾನಂದ ಬಾಳಿಲ ‘ ಯೋಗ ಶರೀರ ಮತ್ತು ಮನಸ್ಸನ್ನು ಚೈತನ್ಯಗೊಳಿಸುತ್ತದೆ.ಯೋಗವನ್ನು ಗುರುಗಳ ಮುಖಾಂತರ ಅಭ್ಯಾಸ ಮಾಡಿದರೆ ಉತ್ತಮ ಎಂದರು.
ಶಾಲಾ ಪ್ರಾಂಶುಪಾಲ ಅರುಣ್ ಕುಮಾರ್ ಮಾತನಾಡಿ ‘ ಇಂದಿನ ಒತ್ತಡಯುಕ್ತವಾದ ಜೀವನದಲ್ಲಿ ಆತ್ಮವಿಶ್ವಾಸದಿಂದ ನೆಮ್ಮದಿಯಾಗಿರಲು ಮತ್ತು ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಕ್ಷೇತ್ರದಲ್ಲಿ ಗಮನವನ್ನು ಕೇಂದ್ರೀಕರಿಸಲು ಯೋಗವು ಅತ್ಯಗತ್ಯ’ ಎಂದು ಹೇಳಿದರು.

ಆರೋಗ್ಯಧಾಮ ಯೋಗ ವಿದ್ಯಾ ಟ್ರಸ್ಟ್ ಮಂಗಳೂರು, ತಪಸ್ವಿ ಸ್ಕೂಲ್ ಆಫ್ ಯೋಗ ಮಂಗಳೂರು ಮತ್ತು ಕೆನರಾ ಹೈಸ್ಕೂಲ್ ಅಸೋಸಿಯೇಷನ್ ಮಂಗಳೂರು ಇವರು ಆಯೋಜಿಸಿದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾಮಟ್ಟದ ಯೋಗ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನಿಯಾದ ನಾಲ್ಕನೇ ತರಗತಿಯ ವಿದ್ಯಾರ್ಥಿ ಆಶ್ರಿತ್ ಎ ಸಿ ಮತ್ತು ತೃತೀಯ ಸ್ಥಾನಿಯಾದ ಅದಿತಿ ಯು ಇವರಿಗೆ ಪ್ರಶಸ್ತಿ ಪತ್ರ ಮತ್ತು ಸ್ಮರಣಿಕೆಯನಿತ್ತು ಗೌರವಿಸಲಾಯಿತು. ಬಳಿಕ ಯೋಗ ಗುರುಗಳಾದ ಸಂತೋಷ್ ಮುಂಡಕಜೆ ಮಾರ್ಗದರ್ಶನದಲ್ಲಿ ಯೋಗ ಶಿಕ್ಷಕಿ ಪ್ರಶ್ವಿಜ ಅವರ ನೇತೃತ್ವದಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಆಸನಗಳನ್ನು ಅಭ್ಯಾಸ ಮಾಡಿಸಿದರು.ವಿದ್ಯಾರ್ಥಿನಿ ಮೈಥಿಲಿ ಯೋಗ ದಿನದ ಮಹತ್ವ ತಿಳಿಸಿದರು.
ಅತಿಥಿಗಳ ಪರಿಚಯವನ್ನು ಲಾಸ್ಯ ವಾಚಿಸಿದಳು. ಬೃಂದಾ ಜಿ ರಾವ್ ಕಾರ್ಯಕ್ರಮ ನಿರೂಪಿಸಿ, ಫಾತಿಮಾ ಝಿಬ ಸ್ವಾಗತಿಸಿ ಫಾತಿಮತ್ ಅಮ್ನ ವಂದಿಸಿದರು. ಕಾರ್ಯಕ್ರಮದಲ್ಲಿ ಶಾಲಾ ಉಪ ಪ್ರಾಂಶುಪಾಲೆ ಶಿಲ್ಪ ಬಿದ್ದಪ್ಪ ಮತ್ತು ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.