ಸುಳ್ಯ: ಸುಳ್ಯ ತೊಡಿಕಾನದಲ್ಲಿ ನಡೆದ ಅನೈತಿಕ ಪೊಲೀಸ್ ಗಿರಿಯ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಇದರ ವಿರುದ್ಧ ಪೋಲೀಸ್ ಇಲಾಖೆ ಕೈಗೊಂಡ ಶೀಘ್ರ ಕಾನೂನು ಕ್ರಮ ಸ್ವಾಗತಾರ್ಹವಾಗಿದೆ ಎಂದು ಸುಳ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಅಬ್ದುಲ್ ಹಮೀದ್ ಕುತ್ತಮಟ್ಟೆ ಪತ್ರಿಕಾ ಪ್ರಕಟಣೆ ಮೂಲಕ ಹೇಳಿದ್ದಾರೆ. ಘಟನೆಗೆ ಸಂಬಂಧಪಟ್ಟು ಸುಳ್ಯ ಪೊಲೀಸ್ ಇಲಾಖೆಯವರು ಶೀಘ್ರ ಕಾರ್ಯಪ್ರವೃತ್ತರಾಗಿ ಕೈಗೊಂಡ ಕ್ರಮ ಶ್ಲಾಘನೀಯ ಎಂದು ಅವರು ತಿಳಿಸಿದ್ದಾರೆ. ಅನೈತಿಕ ಪೊಲೀಸ್ ಗಿರಿ ಪ್ರಕರಣ ಖಂಡನೀಯ ಎಂದು ಅವರು ಹೇಳಿದ್ದಾರೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.