ಸುಳ್ಯ:ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಪದಾಧಿಕಾರಿಗಳು ಮತ್ತು ದ. ಕ ಜಿಲ್ಲಾ ಯುವ ಕಾಂಗ್ರೆಸ್ ಉಸ್ತುವಾರಿಗಳು ಸುಳ್ಯ ವಿಧಾನ ಸಭಾ ಕ್ಷೇತ್ರಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ಕಾರ್ಯಕಾರಿಣಿ ಸಭೆ ಸುಳ್ಯದ ಯುವಜನ ಸಂಯುಕ್ತ ಮಂಡಳಿ ಸಭಾಂಗಣದಲ್ಲಿ ನಡೆಯಿತು.ದ. ಕ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಇಬ್ರಾಹಿಂ ನವಾಜ್ ಅಧ್ಯಕ್ಷತೆ ವಹಿಸಿ ಮಾತನಾಡಿ ಯುವ ಕಾಂಗ್ರೆಸ್ ನ ಆಶಯ, ಕರ್ತವ್ಯ ಮತ್ತು
ಸಂಘಟನೆಯ ಉದ್ದೇಶದ ಕುರಿತು ವಿವರ ನೀಡಿದರು.ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕಲ್ಯಾಣ್ ತೇಜಸ್ ಮಾತನಾಡಿ ರಾಜ್ಯದಲ್ಲಿ ಯುವ ಕಾಂಗ್ರೆಸ್ ಬಲಿಷ್ಠ ಗೊಳಿಸಲು ತಲ ಮಟ್ಟದಿಂದ ಸಂಘಟನೆ ಯಾಗಬೇಕಿದೆ. ಯುವ ಕಾಂಗ್ರೆಸ್ ಕಾರ್ಯಕರ್ತರು ಬೂತ್ ಮಟ್ಟದಿಂದ ಡಿಜಿಟಲ್ ಯೂತ್ ಮುಖಾಂತರ ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯ ರಾಗ ಬೇಕೆಂದು ಅಭಿಪ್ರಾಯ ಪಟ್ಟರು.
ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಉಸ್ತುವಾರಿ ಕಾರ್ಯದರ್ಶಿ ಅನಿಲ್ ಚಿನ್ಮಯಿ ಮಾತನಾಡಿ ಯುವ ಕಾಂಗ್ರೆಸ್ ಸಂಘಟನೆ ಮತ್ತು ಬೆಳವಣಿಗೆಗೆ ರಾಜ್ಯ ಸಮಿತಿ ಕಟ್ಟಿಬದ್ದವಾಗಿದೆ. ಪಕ್ಷದ ಭವಿಷ್ಯ ವಾಗಿರುವ ಯುವಕರನ್ನು ಹೆಚ್ಚಾಗಿ ಸೇರಿಸಿಕೊಳ್ಳಬೇಕು. ಯುವಕರಿಗೆ ಪಕ್ಷದಲ್ಲಿ ಅವಕಾಶಗಳು ಹೆಚ್ಚು ಇದೆ. ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಿ ಎಂದು ಸಲಹೆ ನೀಡಿದರು.
ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸುರಯ್ಯ ಅಂಜುಮ್ ಐ ವೈ ಸಿ ಆಪ್ ಬಗ್ಗೆ ವಿವರ ನೀಡಿದರು.
ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಶ್ರೀ ಪ್ರಸಾದ್ ಪಾಣಾಜೆ,ಸುಳ್ಯ ವಿಧಾನ ಸಭಾ ಕ್ಷೇತ್ರದ 2023ರ ಅಭ್ಯರ್ಥಿ ಜಿ. ಕೃಷ್ಣಪ್ಪ, ದ ಕ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ, ಸುಳ್ಯ ಬ್ಲಾಕ್ ಕಾಂಗ್ರೆಸ್ ನಿಯೋಜಿತ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು, ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಭಿಲಾಷ್, ಯುವ ಕಾಂಗ್ರೆಸ್ ಸುಳ್ಯ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಫೈಝಲ್ ಕಡಬ ಮಾತನಾಡಿದರು.
ಕಾರ್ಯಕ್ರಮದಲ್ಲಿ ಸಹಕಾರಿ ರತ್ನ ಪ್ರಶಸ್ತಿ ಪುರಸ್ಕೃತರಾಗಿರುವ ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ ಜಯರಾಮ ಮತ್ತು ಕರ್ನಾಟಕ ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ. ಶಹೀದ್ ತೆಕ್ಕಿಲ್ ಅವರನ್ನು ಸುಳ್ಯ ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ ಗೌರವಿಸಲಾಯಿತು.
ವೇದಿಕೆಯಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಮಹಮ್ಮದ್ ಬಶೀರ್, ಸುಳ್ಯ ಬ್ಲಾಕ್ ಪ್ರಧಾನ ಕಾರ್ಯದರ್ಶಿ ಪಿ ಎಸ್ ಗಂಗಾಧರ್, ಸುಳ್ಯ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಶಾಹುಲ್ ಹಮೀದ್ ಕುತ್ತಮೊಟ್ಟೆ, ಸುಳ್ಯ ವಿಧಾನ ಸಭಾ ಕ್ಷೇತ್ರ ಯುವಕಾಂಗ್ರೇಸ್ ಉಪಾಧ್ಯಕ್ಷ ರಂಜಿತ್ ರೈ ಮೇನಾಲ ಉಪಸ್ಥಿತರಿದ್ದರು. ಸುಳ್ಯ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಚೇತನ್ ಕಜೆಗದ್ದೆ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಡಬ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಶಾಕೀರ್ ಪೀಲ್ಯ ವಂದಿಸಿದರು. ದ. ಕ ಜಿಲ್ಲಾ ಕಾಂಗ್ರೆಸ್ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ಕಾರ್ಯದರ್ಶಿ ಭವಾನಿಶಂಕರ್ ಕಲ್ಮಡ್ಕ ಕಾರ್ಯಕ್ರಮ ನಿರೂಪಿಸಿದರು.
ಪ್ರಮುಖರಾದ ಸತ್ಯಕುಮಾರ್ ಆಡಿಂಜಾ, ನಂದರಾಜ್ ಸಂಕೇಶ್, ಶಾಫಿ ಕುತ್ತಮೊಟ್ಟೆ, ಪ್ರವೀಣ್ ಮುಂಡೋಡಿ, ಶಿವಕುಮಾರ್ ಕಂದಡ್ಕ, ರವಿಕುಮಾರ್ ಕಿರಿಭಾಗ, ಪ್ರೇಮ ಹರೀಶ್ವರನ್ ಗಾಂಧಿ, ರಕ್ಷಿತ್ ದೊಡ್ಡಡ್ಕ, ಜಯಪ್ರಕಾಶ್ ನೆಕ್ರಪ್ಪಾಡಿ, ಮಹೇಶ್ ಬೆಳ್ಳಾರ್ಕರ್, ಮಂಜುನಾಥ್ ಮಡ್ತಿಲ, ಸೇರಿದಂತೆ ಸುಳ್ಯ ವಿಧಾನ ಸಭಾ ಕ್ಷೇತ್ರದ ಯುವಕಾಂಗ್ರೇಸ್ ವ್ಯಾಪ್ತಿಯ ಕಾರ್ಯಕರ್ತರು, ಪದಾಧಿಕಾರಿಗಳು ಮತ್ತು ಕಾಂಗ್ರೆಸ್ ಮುಖಂಡರು ಭಾಗವಹಿಸಿದ್ದರು.













