ಸುಳ್ಯ:ರಾಜ್ಯ ಯುವ ಕಾಂಗ್ರೆಸ್ ಗೆ ನಡೆದ ಆಂತರಿಕ ಚುನಾವಣೆಯ ಫಲಿತಾಂಶ ಇಂದು ಪ್ರಕಟಗೊಂಡಿದ್ದು ಸುಳ್ಯ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಚೇತನ್ ಕಜೆಗದ್ದೆ ಅತ್ಯಧಿಕ ಮತಗಳಿಂದ ಗೆಲುವು ಸಾಧಿಸಿ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಇವರ
ಪ್ರತಿಸ್ಪರ್ಧಿಯಾಗಿದ್ದ ಆಶಿಕ್ ಅರಂತೋಡುರವರು ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಸುಳ್ಯ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಫೈಝಲ್ ಕಡಬ ಆಯ್ಕೆಯಾಗಿದ್ದಾರೆ. ರಂಜಿತ್ ರೈ ಮೇನಾಲ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ ಎಂದು ತಿಳಿದು ಬಂದಿದೆ.