ಸುಳ್ಯ:ನೆಹರು ಮೆಮೋರಿಯಲ್ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ವತಿಯಿಂದ ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಸಹಯೋಗದೊಂದಿಗೆಪ್ರಥಮ ಚಿಕಿತ್ಸೆ ಹಾಗೂ ಬಿಸಿಗಾಳಿ ನಿವಾರಣೆ ಕುರಿತು ಮಾಹಿತಿ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ನಡೆಯುತು.
ಸಂಪನ್ಮೂಲ ವ್ಯಕ್ತಿಯಾಗಿ
ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಶಸ್ತ್ರಚಿಕಿತ್ಸಾ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ. ಸಾಯಿಗೀತಾ ಜ್ಞಾನೇಶ್ ಭಾಗವಹಿಸಿದ್ದರು.ಕಾಲೇಜಿನ ಪ್ರಾಂಶುಪಾಲ ಡಾ. ರುದ್ರಕುಮಾರ್ ಎಂ.ಎಂ ಅಧ್ಯಕ್ಷತೆ ವಹಿಸಿದ್ದರು.ಕಾಲೇಜಿನ ಆಡಳಿತಾಧಿಕಾರಿ ಚಂದ್ರಶೇಖರ್ ಪೇರಾಲ್,ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ಶ್ರೀಮತಿ ರತ್ನಾವತಿ ಡಿ , ಐಕ್ಯೂಎಸಿ ಸಂಯೋಜಕಿ ಡಾ. ಮಮತಾ ಕೆ. ರೆಡ್ ಕ್ರಾಸ್ ಕಾರ್ಯಕ್ರಮಾಧಿಕಾರಿ ಡಾ. ಅನುರಾಧಾ ಕುರುಂಜಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ರೆಡ್ ಕ್ರಾಸ್ ಸದಸ್ಯರಾದ ಹವ್ಯಾ, ಭೂಮಿಕಾ ರೈ ಸಿ, ಧೃತಿ ಎಂ ಪ್ರಾರ್ಥಿಸಿ, ಸಿಂಚನ ಎನ್ ಸ್ವಾಗತಿಸಿ, ಕಾರ್ಯಕ್ರಮ ಸಂಯೋಜಕಿ, ರೆಡ್ ಕ್ರಾಸ್ ಕಾರ್ಯಕ್ರಮಾಧಿಕಾರಿ ಡಾ. ಅನುರಾಧಾ ಕುರುಂಜಿ ಪ್ರಾಸ್ತಾವಿಕವಾಗಿ ಮಾತನಾಡಿ, ಸಿಂಚನ ಎ. ಪಿ ವಂದಿಸಿದರು. ಕಲ್ಪಿತ ಎಂ ಮತ್ತು ದೀಪ ಕೆ ಕಾರ್ಯಕ್ರಮ ನಿರೂಪಿಸಿದರು.











