ಕೋಲ್ಕತ್ತ: ಮುಂಬರುವ ಲೋಕಸಭೆ ಚುನಾವಣೆಗೆ ಪಶ್ಚಿಮ ಬಂಗಾಳದ 42 ಕ್ಷೇತ್ರಗಳಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ.ಕೋಲ್ಕತ್ತದ ಬ್ರಿಗೇಡ್ ಪರೇಡ್ ಮೈದಾನದಲ್ಲಿ ನಡೆದ ಸಮಾವೇಶದಲ್ಲಿ ಅಭಿಷೇಕ್ ಬ್ಯಾನರ್ಜಿಯವರು ಪಕ್ಷದ ಅಭ್ಯರ್ಥಿಗಳನ್ನು ಘೋಷಣೆ ಮಾಡಿದರು.ಭಾರತ ತಂಡದ ಮಾಜಿ ಕ್ರಿಕೆಟಿಗ
ಯೂಸುಫ್ ಪಠಾಣ್ ಅವರನ್ನು ಬೆಹ್ರಾಂಪುರ ಕ್ಷೇತ್ರದಿಂದ ಟಿಎಂಸಿ ಕಣಕ್ಕಿಳಿಸಿದೆ. ಈ ಕ್ಷೇತ್ರವನ್ನು ಈಗ ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಅವರು ಪ್ರತಿನಿಧಿಸುತ್ತಿದ್ದಾರೆ. ಡೈಮಂಡ್ ಹಾರ್ಬರ್ ಕ್ಷೇತ್ರದಿಂದ ಅಭಿಷೇಕ್ ಬ್ಯಾನರ್ಜಿ, ಅಸಾಂಸೋಲ್ನಿಂದ ಶತ್ರುಘನ್ ಸಿನ್ಹಾ, ಲೋಕಸಭೆ ಸದಸ್ಯತ್ವದಿಂದ ವಜಾಗೊಂಡಿರುವ ಮಹುವಾ ಮೊಯಿತ್ರಾ ಅವರು ಕೃಷ್ಣನಗರ ಕ್ಷೇತ್ರದಿಂದ,ಶ್ರೀರಾಮಪುರ ದಿಂದ ಕಲ್ಯಾಣ್ ಬ್ಯಾನರ್ಜಿ, ಭರ್ದಮಾನ್ನಿಂದ ಮಾಜಿ ಕ್ರಿಕೆಟಿಗ ಕೀರ್ತಿ ಅಜಾದ್, ಡಂ ಡಂನಿಂದ ಸುಗತಾ ರಾಯ್ ಅದೃಷ್ಟ ಪರೀಕ್ಷೆಗೆ ಇಳಿಯಲಿದ್ದಾರೆ.
ಪಶ್ಚಿಮ ಬಂಗಾಳ ಹೊರತುಪಡಿಸಿ ಅಸ್ಸಾಂ, ಉತ್ತರ ಪ್ರದೇಶ ಹಾಗೂ ಮೇಘಾಲಯದಲ್ಲಿ ಟಿಎಂಸಿ ಸ್ಪರ್ಧೆ ಮಾಡಲಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದರು.









