ಪಂಜ:ಯುವಜನ ಸಂಯುಕ್ತ ಮಂಡಳಿ ಸುಳ್ಯ ಇದರ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಬೆಂಗಳೂರು, ದ.ಕ.ಜಿಲ್ಲಾ ಯುವಜನ ಒಕ್ಕೂಟ ಮಂಗಳೂರು ಇದರ ಸಹಯೋಗದಲ್ಲಿ ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ರಾಜ್ಯ ಮಟ್ಟದ ಯುವಸಂಭ್ರಮ ಕಾರ್ಯಕ್ರಮದ ಎರಡನೇ ದಿನವಾದ ಭಾನುವಾರ ಯುವ ಪ್ರಶಸ್ತಿ ಹಾಗೂ
ಪಂಚ ಸಪ್ತತಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು. ಕಾರ್ಯಕ್ರಮವನ್ನು ದ.ಕ.ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ ರಾಜ್ಯ ಸಂಭ್ರಮ ಉದ್ಘಾಟಿಸಿದರು. 75 ದಿನಗಳ ಕಾಲ ನಡೆಸಿದ ಸ್ವಚ್ಚತಾ ಅಭಿಯಾನ ಯುವಜನ ಸಂಯುಕ್ತ ಮಂಡಳಿ ಮಾಡಿರುವ ಶ್ರೇಷ್ಠ ಕಾರ್ಯ ಎಂದು ಹೇಳಿದರು.
ಶಾಸಕಿ ಭಾಗೀರಥಿ ಮುರುಳ್ಯ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ ‘ಯುವಕರು ಚಿಂತೆ ಮಾಡುವುದನ್ನು ಬಿಟ್ಟು ಚಿಂತನಾಶೀಲರಾಗಿ ಸಮಾಜಕ್ಕೆ ಕೊಡುಗೆ ನೀಡುವ ಕೆಲಸ ಮಾಡಬೇಕು. ಸಂಘ ಸಂಸ್ಥೆಯಲ್ಲಿ ತೊಡಗಿಸಿಕೊಂಡು ಕ್ರಿಯಾಶೀಲರಾಗಿರಬೇಕು ಆ ಮೂಲಕ ತಮ್ಮೂರಿನ ಅಭಿವೃದ್ಧಿ ಕಾರ್ಯದಲ್ಲಿ ಕೈಜೋಡಿಸಬೇಕು ಎಂದು ಹೇಳಿದರು. ಯುವಜನ ಮೇಳಗಳು ನಡೆಯಬೇಕು, ಅದಕ್ಕೆ ಸರಕಾರ ಅನುದಾನ ನೀಡಬೇಕು ಎಂದು ಅವರು ಒತ್ತಾಯಿಸಿದರು.

ಮೆರವಣಿಗೆಗೆ ಚಾಲನೆ ನೀಡಿದ ರಾಜ್ಯ ಕನಿಷ್ಠ ವೇತನಾ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ.ಶಹೀದ್ ತೆಕ್ಕಿಲ್ ಮಾತನಾಡಿ ಗ್ರಾಮೀಣ ಭಾಗದ ಯುವಕರ ಪ್ರತಿಭೆ ಅನಾವರಣಕ್ಕೆ ವೇದಿಕೆಯಾಗಿದ್ದ ಯುವಜನಮೇಳಗಳು ಮತ್ತೆ ನಡೆಯಬೇಕು, ಅದಕ್ಕೆ ಅನುದಾನ ದೊರಕಿಸುವ ನಿಟ್ಟಿನಲ್ಲಿ ಪ್ರಯತ್ನ ನಡೆಸಲಾಗುವುದು ಎಂದು ಹೇಳಿದರು.
ಜಾನುವಾರ ಮೇಳ ಉದ್ಘಾಟಿಸಿದ ಅರೆಭಾಷೆ ಅಕಾಡೆಮಿ ಮಾಜಿ ಅಧ್ಯಕ್ಷ ಪಿ.ಸಿ.ಜಯರಾಮ್, ಬೆಳ್ತಂಗಡಿಯ ಕಿರಣ್ ಚಂದ್ರ ಡಿ ಪುಷ್ಪಗಿರಿ ಉರುವಾಲು, ಮಂಗಳೂರು ಡಿ.ಕೆ. ಗ್ರೂಪ್ ಆಫ್ ಕಂಪೆನೀಸ್ ವ್ಯವಸ್ಥಾಪಕ ನಿರ್ದೇಶಕ ಅಲ್ವಿನ್ ಜೋಯಲ್ ನೊರೊನ್ಹಾ,
ರಾಜ್ಯ ಯುವಜನ ಒಕ್ಕೂಟದ ಅಧ್ಯಕ್ಷ ಡಾ.ಬಾಲಾಜಿ, ಜಿಲ್ಲಾ ಯುವಜನ ಒಕ್ಕೂಟದ ಅಧ್ಯಕ್ಷ ಸುರೇಶ್ ರೈ ಸೂಡಿಮುಳ್ಳು, ಜಿ.ಪಂ. ಮಾಜಿ ಅಧ್ಯಕ್ಷ ವೆಂಕಟ್ ದಂಬೆಕೋಡಿ, ಯುವಜನ ಸೇವಾ ಕ್ರೀಡಾ ಇಲಾಖೆಯ ಸುಳ್ಯ ತಾಲೂಕು ಕ್ರೀಡಾಧಿಕಾರಿ ದೇವರಾಜ್ ಮುತ್ಲಾಜೆ, ಹಿರಿಯರಾದ

ಶ್ರೇಯಾಂಸ್ ಕುಮಾರ್ ಶೆಟ್ಟಿಮೂಲೆ, ಜಿಲ್ಲಾ ಯುವಜನ ಒಕ್ಕೂಟದ ನಿರ್ದೇಶಕ ರಾಕೇಶ್ ರೈ ಕೆಡೆಂಜಿ, ಯುವಜನ ಸೇವಾ ಸಂಸ್ಥೆಯ ಅಧ್ಯಕ್ಷ ದೀಪಕ್ ಕುತ್ತಮೊಟ್ಟೆ, ಎ.ಪಿ.ಎಂ.ಸಿ. ಮಾಜಿ ಉಪಾಧ್ಯಕ್ಷ ಸಂತೋಷ್ ಜಾಕೆ, ಹಿರಿಯ ವೈದ್ಯರಾದ ಡಾ. ರಾಮಯ್ಯ ಭಟ್, ಜೇಸಿಐ ಪಂಜ ಪಂಚಶ್ರೀ ಅಧ್ಯಕ್ಷ ದೇವಿಪ್ರಸಾದ್ ಚಿಕ್ಮುಳಿ,ಯಂ. ಮಾಧವ ಗೌಡ ಬೆಳ್ಳಾರೆ, ಯುವ ಸಂಭ್ರಮ ಸಂಘಟನಾ ಸಮಿತಿ ಅಧ್ಯಕ್ಷ ದಿಲೀಪ್ ಬಾಬ್ಲುಬೆಟ್ಟು, ಪ್ರಧಾನ ಕಾರ್ಯದರ್ಶಿ ವಿಜೇಶ್ ಹಿರಿಯಡ್ಕ, ಯುವಜನ ಸಂಯುಕ್ತ ಮಂಡಳಿ ಅಧ್ಯಕ್ಷ ಪವನ್ ಪಲ್ಲತ್ತಡ್ಕ, ಗೌರವಾಧ್ಯಕ್ಷ ವಿಜಯಕುಮಾರ್ ಉಬರಡ್ಕ, ಕಾರ್ಯದರ್ಶಿ ಮುರಳಿ ನಳಿಯಾರು, ಕೋಶಾಧಿಕಾರಿ ಲೋಹಿತ್ ಬಾಳಿಕಳ ವೇದಿಕೆಯಲ್ಲಿ ಇದ್ದರು.

ಪ್ರಶಸ್ತಿ ಪ್ರದಾನ : ರಾಜ್ಯದ 31 ಜಿಲ್ಲೆಗಳ ಯುವ ಸಾಧಕರಿಗೆ ಯುವ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಶ್ರೀ ದುರ್ಗಾ ಮಹಿಳಾ ಮಂಡಲ ಕೊಳಗದ್ದೆ (ಉತ್ತರಕನ್ನಡ), ಶ್ರೀ ವಿಷ್ಣು ಯುವಶಕ್ತಿ ಬಳಗ ಮಜ್ಜಾರಡ್ಕ (ದ.ಕ.) ಯುವ ಸಾಂಘಿಕ ಪ್ರಶಸ್ತಿ ಪಡೆದರು.
75 ದಿನಗಳ ಕಾಲ ಸುಳ್ಯ ತಾಲೂಕಿನಲ್ಲಿ ಸ್ವಚ್ಚತಾ ಅಭಿಯಾನದಲ್ಲಿ ಭಾಗವಹಿಸಿದ 51 ತಂಡಗಳಲ್ಲಿ ಯುವಕ ಮಂಡಲದ ವಿಭಾಗದಲ್ಲಿ ವೀರ ಮಾರುತಿ ಗುತ್ತಿಗಾರು ಪ್ರಥಮ ಸ್ಥಾನ ಪಡೆದರೆ, ಯುವತಿಯರ ವಿಭಾಗದಲ್ಲಿ ಮಯೂರಿ ಯುವತಿ ಮಂಡಲ ಚೊಕ್ಕಾಡಿ ಪ್ರಥಮ ಸ್ಥಾನ ಪಡೆದರು. ಸಮಾರಂಭದಲ್ಲಿ ತಂಡಗಳನ್ನು ಗೌರವಿಸಲಾಯಿತು. ಮುರಳಿ ನಳಿಯಾರು ಕಾರ್ಯಕ್ರಮ ನಿರ್ವಹಿಸಿದರು.
ಯುವಜನ ಸಂಯುಕ್ತ ಮಂಡಳಿ ಪೂರ್ವಾಧ್ಯಕ್ಷ ದಿನೇಶ್ ಮಡಪ್ಪಾಡಿ ಪ್ರಾಸ್ತಾವಿಕ ಮಾತನಾಡಿದರು.ರಮ್ಯ ಬಾಬ್ಲುಬೆಟ್ಟು, ಆದ್ಯಾ ಬಾಬ್ಲುಬೆಟ್ಟು, ಆರಾಧನಾ ಬಾಬ್ಲುಬೆಟ್ಟು ಪ್ರಾರ್ಥಿಸಿದರು.
ಸೋಮಶೇಖರ್ ನೇರಳ – ಕೌಶಿಕ್ ಕುಳ ಕಾರ್ಯಕ್ರಮ ನಿರೂಪಿಸಿದರು.












