ಪಂಜ: ವರ್ಣ ವೈಭವದ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಪಂಜದಲ್ಲಿ ರಾಜ್ಯ ಮಟ್ಟದ ಯುವ ಸಂಭ್ರಮ ಆರಂಭಗೊಂಡಿದೆ.
ಪಂಜದ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಸುಳ್ಯದ ಯುವಜನ ಸಂಯುಕ್ತ ಮಂಡಳಿ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಬೆಂಗಳೂರು, ದ.ಕ. ಜಿಲ್ಲಾ ಯುವಜನ ಒಕ್ಕೂಟ ಮಂಗಳೂರು ಇದರ ಸಹಯೋಗದೊಂದಿಗೆ
ಜ.17 ಮತ್ತು18ರಂದು ಎರಡು ದಿನಗಳ ಯುವಜನ ಸಂಭ್ರಮ ನಡೆಯಯುತಿದೆ. ಕಲಾ ಮಂದಿರ್ ಡಾನ್ಸ್ ಕ್ರಿವ್ ತಂಡದ ಬೆಳ್ಳಾರೆ ಮತ್ತು ಪಂಜ ಶಾಖೆಯ ವಿದ್ಯಾರ್ಥಿಗಳಿಂದ ಡ್ಯಾನ್ಸ್ ಧಮಾಕ ಮೋಡಿ ಮಾಡಿತು. ವಿಶ್ವ ಕಲಾನಿಕೇತನ ಇನ್ಸ್ಟಿಟ್ಯೂಟ್ ಆಫ್ ಆರ್ಟ್ಸ್ & ಕಲ್ಚರಲ್ ತಂಡದ ಪುತ್ತೂರು, ಪಂಜ ಶಾಖೆಯ ವಿದ್ಯಾರ್ಥಿಗಳಿಂದ ನೃತ್ಯ ವೈಭವ, ಡ್ಯಾನ್ಸ್ & ಬೀಟ್ ಪಂಜ ಮತ್ತು ಇತರ ಶಾಖೆಗಳ ವಿದ್ಯಾರ್ಥಿಗಳಿಂದ ನೃತ್ಯ ವೈವಿಧ್ಯ ಆಯೋಜಿಸಲಾಗಿತ್ತು.

ಮೊದಲ ದಿನ ತಾಲೂಕಿನ ಡ್ಯಾನ್ಸ್ ತಂಡಗಳಿಂದ ಸಾಂಸ್ಕೃತಿಕ ಸಂಭ್ರಮ ನಡೆದರೆ, ಎರಡನೇ ದಿನ ಜ.18ರಂದು ಮಧ್ಯಾಹ್ನ ಬಳಿಕ ರಾಜ್ಯ ಮಟ್ಟದ ಆಹ್ವಾನಿತ ತಂಡಗಳಿಂದ ಜನಪದ ವೈವಿಧ್ಯ ಸ್ಪರ್ಧೆ ಆಯೋಜಿಸಲಾಗಿದೆ.
ಎರಡು ದಿನ ನಡೆಯುವ ಯುವ ಸಂಭ್ರಮ ಕಾರ್ಯಕ್ರಮದಲ್ಲಿ ಕೃಷಿ ಮೇಳ, ವಸ್ತು ಪ್ರದರ್ಶನ, ಆಹಾರ ಮೇಳ, ವಾಹನ ಸಾಲ ಮೇಳ, ವಾಹನ ಮೇಳ ಹಾಗೂ ಜಾನುವಾರು ಮೇಳಗಳನ್ನು ಆಯೋಜನೆ ಮಾಡಲಾಗಿದೆ.













