ಪಂಜ:ಪಂಜದ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯುತ್ತಿರುವ ಯುವ ಸಂಭ್ರಮದ ಅಂಗವಾಗಿ
ವಿವಿಧ ಮೇಳಗಳ ಉದ್ಘಾಟನೆ ನಡೆಯಿತು. ವಾಹನ ಮೇಳವನ್ನು ಡಿಸಿಸಿ ಬ್ಯಾಂಕ್ ನಿರ್ದೇಶಕ ಎಸ್.ಎನ್.ಮನ್ಮಥ ಉದ್ಘಾಟಿಸಿದರು. ಕೃಷಿ ಮೇಳವನ್ನು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಸದಾನಂದ ಮಾವಜಿ ಉದ್ಘಾಟಿಸಿದರು. ಆಹಾರ ಮೇಳವನ್ನು

ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂರು ಉದ್ಘಾಟಿಸಿದರು. ವಸ್ತು ಮೇಳವನ್ನು ಮರ್ಕಂಜ ಶ್ರೀ ಅನ್ನಪೂರ್ಣೇಶ್ವರಿ ಕ್ಷೇತ್ರ ಯೋಗೀಶ್ವರ ಸಿದ್ಧ ಮಠದ ಧರ್ಮದರ್ಶಿ ರಾಜೇಶನಾಥ್ ಜೀ ಅವರು ಉದ್ಘಾಟಿಸಿದರೆ, ಸಾಂಸ್ಕೃತಿಕ ಸಂಭ್ರಮಕ್ಕೆ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಉದ್ಘಾಟಿಸಿದರು.

ಸುಳ್ಯದ ಯುವಜನ ಸಂಯುಕ್ತ ಮಂಡಳಿ ಹಾಗೂ ಯುವ ಸಂಭ್ರಮ ಸಮಿತಿ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಎರಡು ದಿನಗಳ ಕಾರ್ಯಕ್ರಮದಲ್ಲಿ ಕೃಷಿ ಮೇಳ, ವಸ್ತು ಪ್ರದರ್ಶನ, ಆಹಾರ ಮೇಳ, ವಾಹನ ಮೇಳ ಹಾಗೂ ಜಾನುವಾರು ಮೇಳಗಳನ್ನು ಆಯೋಜನೆ ಮಾಡಲಾಗಿದೆ.













