ಸುಳ್ಯ:ತಾಲೂಕು ಆಡಳಿತ, ತಾಲೂಕು ಪಂಚಾಯತ್, ಪಟ್ಟಣ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉನ್ನತ ಶಿಕ್ಷಣ ಇಲಾಖೆ ಕಾನೂನು ಮತ್ತು ಮಾನವ ಹಕ್ಕು ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಸುಳ್ಯ ಇವರ ಸಹಭಾಗಿತ್ವದಲ್ಲಿ ‘ಯುವ ಸಂಸತ್ತು’ ಕಾರ್ಯಕ್ರಮ ಸುಳ್ಯದ
ನೆಹರು ಮೆಮೋರಿಯಲ್ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಪ್ರಜಾಪ್ರಭುತ್ವದ ಮೌಲ್ಯಗಳು, ಸಂವಿಧಾನದ ಆಶಯಗಳು ಹಾಗೂ ಸಂಸದೀಯ ವ್ಯವಸ್ಥೆಯ ಕಾರ್ಯವೈಖರಿಯ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಯುವ ಸಂಪತ್ತು ನಡೆಯಿತು.
ತಹಶೀಲ್ದಾರ್ ಮಂಜುಳಾ ಎಂ. ಕಾರ್ಯಕ್ರಮ ಉದ್ಘಾಟಿಸಿದರು. ಸುಳ್ಯ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಪಿ.ಎಸ್. ಗಂಗಾಧರ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕೆ.ಎಂ.ಮುಸ್ತಫ,
ಕಾಲೇಜಿನ ಆಡಳಿತಾಧಿಕಾರಿ ಚಂದ್ರಶೇಖರ ಪೇರಾಲ್, ಸುಳ್ಯ ತಾಲೂಕಿನ ಶಿಕ್ಷಣಾಧಿಕಾರಿ ವೈ.ಎಸ್. ಹರಗಿ, ನೆಹರು ಮೆಮೋರಿಯಲ್ ಕಾಲೇಜಿನ ಪ್ರಾಂಶುಪಾಲ ಡಾ. ರುದ್ರಕುಮಾರ್ ಎಂ.ಎಂ. ಹಾಗೂ ಕೆವಿಜಿ ಕಾನೂನು ಕಾಲೇಜಿನ ಪ್ರಾಂಶುಪಾಲೆ ಟೀನಾ ಉಪಸ್ಥಿತರಿದ್ದರು.
ಸಂಸತ್ತಿನ ಕಾರ್ಯವಿಧಾನ, ಪ್ರಜಾಪ್ರಭುತ್ವದ ವ್ಯವಸ್ಥೆ ಹಾಗೂ ಸಂಸದೀಯ ಚರ್ಚೆಗಳ ಮಹತ್ವವನ್ನು ಪ್ರಾಯೋಗಿಕವಾಗಿ ಪರಿಚಯಿಸುವ ಮೂಲಕ ವಿದ್ಯಾರ್ಥಿಗಳಲ್ಲಿ ರಾಜಕೀಯ ಮತ್ತು ಪ್ರಜಾಸತ್ತಾತ್ಮಕ ಅರಿವು ಮೂಡಿಸಲಾಯಿತು.










