ಸವಣೂರು: ಸವಣೂರಿನಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಯುವಜನ ಮೇಳದಲ್ಲಿ ಯುವಕರ ವಿಭಾಗದಲ್ಲಿ ಸುಳ್ಯ ತಾಲೂಕು ಸಮಗ್ರ ಪ್ರಶಸ್ತಿ ಪಡೆದುಕೊಂಡಿದೆ. ಯುವತಿಯರ ವಿಭಾಗದಲ್ಲಿ ಪುತ್ತೂರು ತಾಲೂಕು ಸಮಗ್ರ ಪ್ರಶಸ್ತಿ ಪಡೆದುಕೊಂಡಿತು.ದಕ್ಷಿಣ ಕನ್ನಡ
ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಯುವಜನ ಒಕ್ಕೂಟ, ಕಡಬ ತಾಲೂಕು ಪಂಚಾಯತ್, ಸವಣೂರು ಗ್ರಾ.ಪಂ. ಹಾಗೂ ಸವಣೂರು ಯುವಕ ಮಂಡಲದ ಸಹಯೋಗದಲ್ಲಿ
ಸವಣೂರಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ
2023-24ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಯುವಜನ ಮೇಳ ಹಾಗೂ ರಾಜ್ಯ ಯುವಜನ ಒಕ್ಕೂಟದ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಿತು.












