ಬೆಂಗಳೂರು:ವಿಧಾನಸೌಧದ ಬ್ಯಾಂಕ್ವೇಟ್ ಹಾಲ್ನಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಯುವ ನಿಧಿ ಯೋಜನೆಯ ನೋಂದಣಿ ಪ್ರಕ್ರಿಯೆಗೆ ಚಾಲನೆ ನೀಡಿದರು. ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ಈಗಾಗಲೇ ನಾಲ್ಕು ಗ್ಯಾರಂಟಿಗಳನ್ನು ನೀಡಿದೆ. ಈಗ ಐದನೇ ಗ್ಯಾಂಟಿ ಆಗಿರುವ ಯುವ ನಿಧಿ ಯೋಜನೆಯ ನೋಂದಣಿಗೂ ಚಾಲನೆ ನೀಡಲಾಗಿದೆ. ಜನವರಿ 12 ಸ್ವಾಮಿ ವಿವೇಕಾನಂದರ ಜನ್ಮದಿನದಂದು ಶಿವಮೊಗ್ಗದಲ್ಲಿ ಈ ಯೋಜನೆಗೆ
ಅಧಿಕೃತ ಚಾಲನೆ ಸಿಗಲಿದೆ. ಅಂದು ನಿರುದ್ಯೋಗಿ ಯುವಕರ ಖಾತೆಗೆ ನೇರವಾಗಿ ಹಣ ಜಮೆ ಆಗಲಿದೆ. ಯುವನಿಧಿ ಯುವ ಜನತೆಯ ಉಜ್ವಲ ಭವಿಷ್ಯಕ್ಕಾಗಿ ಎಂಬ ಶೀರ್ಷಿಕೆಯಡಿ ಕಾರ್ಯಕ್ರಮ ನಡೆದಿದ್ದು, ಯುವನಿಧಿ ಯೋಜನೆಗೆ ಪ್ರಸಕ್ತ ಸಾಲಿ ವರ್ಷದಲ್ಲಿ 250 ಕೋಟಿ ಹಾಗೂ ಮುಂದಿನ ವರ್ಷಕ್ಕೆ 1,250 ಕೋಟಿ ರೂ. ವೆಚ್ಚ ತಗುಲಲಿದೆ. ಬೆಂಗಳೂರು ಒನ್, ಕರ್ನಾಟಕ ಒನ್, ಸೇವಾಸಿಂಧು ಪೋರ್ಟ್ಗಳಲ್ಲಿ ನೋಂದಣಿ ಮಾಡಿಕೊಳ್ಳಬಹುದಾಗಿದೆ.
ಯುವನಿಧಿ ನೋಂದಣಿ ಪ್ರಕ್ರಿಯೆಗೆ ಚಾಲನೆ ನೀಡಿದ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನೀವು ಎರಡು ವರ್ಷದೊಳಗೆ ಉದ್ಯೋಗ ಪಡೆದುಕೊಳ್ಳಬೇಕು. ಅದಕ್ಕೆ ಬೇಕಾದ ತರಬೇತಿಯನ್ನ ಕೌಶಲ್ಯಾಭಿವೃದ್ಧಿ ಇಲಾಖೆ ಮಾಡುತ್ತೆ. ನಮ್ಮ ರಾಜ್ಯದಲ್ಲಿ ಬಂಡವಾಳ ಹೂಡಿಕೆಗೂ ಪ್ರೋತ್ಸಾಹ ನೀಡುತ್ತಿದ್ದೇವೆ. ಬಂಡವಾಳ ಹೂಡಿಕೆಗೆ ಪ್ರೋತ್ಸಾಹಿಸಿದರೆ ಹೆಚ್ಚು ಉದ್ಯೋಗ ಸೃಷ್ಟಿ ಆಗುತ್ತದೆ ಎಂದರು.
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತನಾಡಿ ‘ನನಗೆ ಹಾಗೂ ಸಿದ್ದರಾಮಯ್ಯರಿಗೂ ಇದು ಕನಸಿನ ಕರ್ನಾಟಕ
ಸರ್ಕಾರದ ಯುವನಿಧಿ ಯೋಜನೆ ನೋಂದಣಿ ಪ್ರಕ್ರಿಯೆಗೆ ಚಾಲನೆ ಬಳಿಕ ನನಗೆ ಅತೀ ಸಂತೋಷ ಆಗಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕರಾದ ರಿಜ್ವಾನ್ ಅರ್ಷದ್ ವಹಿಸಿದ್ದರು. ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಚಿವರಾದ ಶರಣಪ್ರಕಾಶ್ ಪಾಟೀಲ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ನಾಗೇಂದ್ರ, ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷ ಶ್ರೀ ರಾಜೀವ್ ಗೌಡ , ಪರಿಷತ್ ಸದಸ್ಯ ಯು.ಬಿ.ವೆಂಕಟೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ನಸೀರ್ ಅಹ್ಮದ್ ಹಾಜರಿದ್ದರು.










