ಸುಳ್ಯ:ಸುಳ್ಯದ ಜಿ.ಪಂ. ಇಂಜಿನಿಯರಿಂಗ್ ಉಪವಿಭಾಗದ ನೂತ ಕಟ್ಟಡ ನಿರ್ಮಾಣ ಕಾಮಗಾರಿಗೆ ಗುದ್ದಲಿಪೂಜೆ ಫೆ.1ರಂದು ನಡೆಯಿತು. 1.65 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುವ ನೂತನ ಕಟ್ಟಡ ಕಾಮಗಾರಿಗೆ ಶಾಸಕಿ ಭಾಗೀರಥಿ ಮುರುಳ್ಯ ಅವರು ಗುದ್ದಲಿ ಪೂಜೆ
ನೆರವೇರಿಸಿದರು.ಪುರೋಹಿತ ಹರೀಶ್ ಭಟ್ ನೇತೃತ್ವದಲ್ಲಿ ಪೂಜೆಗಳು ನೆರವೇರಿತು. ಜಿ.ಪಂ. ಇಂಜಿನಿಯರಿಂಗ್ ಉಪವಿಭಾಗದ ಎಇಇ ರುಕ್ಮಾಂಗದ ಇಂಜಿನಿಯರ್ಗಳಾದ ಜನಾರ್ಧನ, ಮಣಿಕಂಠ ಮತ್ತು ಇಲಾಖೆಯ ಸಿಬ್ಬಂದಿಗಳು ಸುಳ್ಯ ನ.ಪಂ. ಮಾಜಿ ಅಧ್ಯಕ್ಷ ವಿನಯಕುಮಾರ್ ಕಂದಡ್ಕ, ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುಬೋಧ್ ಶೆಟ್ಟಿ ಮೇನಾಲ ಗುತ್ತಿಗೆದಾರ ರವಿಪ್ರಸಾದ್ ಕೇರ್ಪಳ ಮತ್ತಿತರರು ಉಪಸ್ಥಿತರಿದ್ದರು.









